HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಭರ್ಜರಿ ಗೆಲುವು

07:50 PM Nov 23, 2024 IST | ಅಮೃತ ಮೈಸೂರು
Advertisement

ಬೆಂಗಳೂರು: ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

Advertisement

ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಬಿಜೆಪಿಯಲ್ಲಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಸಿ.ಪಿ.ಯೋಗೇಶ್ವರ್ ಭಾರೀ ಗೆಲುವು ಸಾಧಿಸಿದ್ದಾರೆ.

ಯೋಗೇಶ್ವರ್ ಅವರು 25,515 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.

ಶಿಗ್ಗಾಂವಿ ವಿಧಾನ ಸಭಾ ಕ್ಷೇತ್ರದಲ್ಲಿ
ಮಾಜಿ ಮುಖ್ಯ ಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾದಿಸಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್​ ನ ಯಾಸೀರ್​ ಪಠಾಣ್​ಗೆ 13,448 ಮತಗಳ ಅಂತರದಲ್ಲಿ ಗೆಲುವು ದೊರೆತಿದೆ.

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್​ ಸಂಸದ ಇ.ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಬಂಗಾರು ಹನುಮಂತು ಸೋಲನುಭವಿಸಿದ್ದಾರೆ.

Advertisement
Tags :
ChannapattanaSandurShiggav
Advertisement
Next Article