For the best experience, open
https://m.navayuganews.com
on your mobile browser.
Advertisement

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿ ಜಯ ಸಾಧಿಸಿದೆ ಎಂದು ‌ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಜನರು ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಎಂದು ಹೇಳಿದರು.

ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ. ನಿಖಿಲ್‌ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್‌ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರ್ಕಾರದ ಪರವಾಗಿ ಕೆಲಸ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಈ ಫಲಿತಾಂಶದ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು. ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಹಿಂಜರಿಯಬೇಕಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರ ದುರುಪಯೋಗ ಮಾಡಿಕೊಂಡು ಗೆದ್ದಿದೆ. ಇದು ಸಾಮಾನ್ಯವಾದ ಫಲಿತಾಂಶವಾಗಿದ್ದು, ಇದಕ್ಕಾಗಿ ಕಾಂಗ್ರೆಸ್‌ ಬೀಗಬೇಕಿಲ್ಲ. ಇದರಲ್ಲಿ ಚಮತ್ಕಾರ ಏನೂ ನಡೆದಿಲ್ಲ ಎಂದು ಅಶೋಕ್ ವಾಗ್ದಾಳಿ ನಡೆಸಿದರು.

Advertisement
Tags :
Advertisement