For the best experience, open
https://m.navayuganews.com
on your mobile browser.
Advertisement

Advertisement

ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿ ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವದರಿಂದ ಇದರ ಬಗ್ಗೆ ಅನವಶ್ಯಕ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಏಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.

ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜ ಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದು ಹೇಳಿದರು.

ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ಸಿದ್ದರಾಮಯ್ಯ ತಿಳಿಸಿದರು.

Advertisement
Tags :
Advertisement