HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ನಟ ಸರಿಗಮ‌ ವಿಜಿ ನಿಧನನಟ ಸರಿಗಮ‌ ವಿಜಿ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ನಟ ಸರಿಗಮ ವಿಜಯ್ ಅವರು ಇಂದು ಬೆಳಿಗ್ಗೆ ವಿಧಿವಶರಾದರು.
06:20 PM Jan 15, 2025 IST | ಅಮೃತ ಮೈಸೂರು
Advertisement

ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಸರಿಗಮ ವಿಜಯ್ ಅವರು ಇಂದು ಬೆಳಿಗ್ಗೆ ವಿಧಿವಶರಾದರು.

Advertisement

ಅವರ ನಿಧನ ವಾರ್ತೆಯನ್ನು ಪುತ್ರ ರೋಹಿತ್‌ ತಿಳಿಸಿದ್ದಾರೆ.

ಚಿತ್ರರಂಗದಲ್ಲಿ ಅವರು ಸರಿಗಮ ವಿಜಿ ಎಂದೇ ಪ್ರಸಿದ್ದರಾಗಿದ್ದಾರೆ.ಸರಿಗಮ ವಿಜಿ ಅವರಿಗೆ 76 ವರ್ಷಗಳಾಗಿತ್ತು.ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಯಶವಂತಪುರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಅವರು ಬುಧವಾರ ಬೆಳಗ್ಗೆ ವಿಧಿವಶರಾಗಿದ್ದಾರೆ.

1980ರಲ್ಲಿ ಗೀತಪ್ರಿಯಾ ನಿರ್ದೇಶನದ ಬೆಳವಳದ ಮಡಿಲಲ್ಲಿ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಮೂಲಕ ಅವರು ಚಿತ್ರರಂಗಕ್ಕೆ ಕಾಲಿಟ್ಟರು.

ಆ ನಂತರ ಚಿತ್ರರಂಗದಲ್ಲಿ ತೊಡಗಿಕೊಂಡು 269 ಚಿತ್ರಗಳಲ್ಲಿ ನಟಿಸಿದ್ದಾರೆ,80 ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ದುಡಿದಿದ್ದಾರೆ.ಅವರು ಹೆಚ್ಚಾಗಿ ಹಾಸ್ಯಭರಿತ ಪಾತ್ರಗಳಲ್ಲಿ ನಟಿಸಿ ಫೇಮಸ್ ಆಗಿದ್ದರು.

Advertisement
Tags :
Bangaluru
Advertisement
Next Article