ಪ್ರವಾಸಕ್ಕೆ ಬಂದಿದ್ದ ಬಸ್ ಉರುಳಿ ಹಲವು ಮಕ್ಕಳಿಗೆ ಗಾಯ
ಪ್ರವಾಸಕ್ಕೆ ಶಾಲಾ ಮಕ್ಕಳನ್ನು ಕರೆತಂದಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಉರುಳಿ ಬಿದ್ದಿರುವುದು
07:03 PM Nov 27, 2024 IST
|
ಅಮೃತ ಮೈಸೂರು
Advertisement
ಮೈಸೂರು: ಪ್ರವಾಸಕ್ಕೆ ಶಾಲಾ ಮಕ್ಕಳನ್ನು ಕರೆತಂದಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಉರುಳಿ ಹತ್ತಕ್ಕೂ ಹೆಚ್ಚು ಮಕ್ಕಳು ಗಾಯಗೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
Advertisement
ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು,ಚಾಲಕನ ಅಜಾಗರೂಕತೆಯಿಂದ ಡಿವೈಡರ್ಗೆ ಡಿಕ್ಕಿಯಾಗಿ ಬಸ್ ಉರುಳಿ ಬಿದ್ದಿದೆ.
ಬಸ್ನಲ್ಲಿ 36 ಮಕ್ಕಳು ಪ್ರವಾಸಕ್ಕೆ ಬಂದಿದ್ದರು,ಅವರಲ್ಲಿ 11 ಮಕ್ಕಳು ಗಾಯಗೊಂಡಿದ್ದಾರೆ,ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆ, ಖಾನಾಪುರದ ಶಾಂತಿನಿಕೇತನ ಶಾಲೆಯ ಮಕ್ಕಳು ಮೈಸೂರಿಗೆ ಪ್ರವಾಸಕ್ಕೆ ಬಂದಿದ್ದರು. ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿ, ಗಾಯಗೊಂಡ ಮಕ್ಕಳನ್ನು ಕೆ.ಆರ್.ಆಸ್ಪತ್ರೆ ಮತ್ತು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಪೋಷಕರು ಭಯಪಡಬಾರದು ಎಂದು ಸೀಮಾ ಲಾಟ್ಕರ್ ತಿಳಿಸಿದ್ದಾರೆ.
Advertisement
Next Article