ಪ್ರಿಯಾಂಕಾ ಗಾಂಧಿ ಪ್ರಮಾಣವಚನ
ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಸಂಸದರಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕರಿಸಿದರು.
07:53 PM Nov 28, 2024 IST
|
ಅಮೃತ ಮೈಸೂರು
Advertisement
ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಸಂಸದರಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕರಿಸಿದರು.
Advertisement
ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡ್ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಧಿಸಿ ಗೆದ್ದಿದ್ದರು. ಕೊನೆಗೆ ವಯನಾಡ್ ಕ್ಷೇತ್ರವನ್ನು ಬಿಟ್ಟರು.
ಅವರಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿದ್ದಾರೆ.
ನವದೆಹಲಿಗೆ ಭೇಟಿ ನೀಡಿರುವ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರಿಯಾಂಕಾ ಅವರನ್ನು ಭೇಟಿಯಾಗಿ ಹೂಗುಚ್ಛ ನೀಡಿ ಶುಭ ಹಾರೈಸಿದರು.
Advertisement
Next Article