HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಮೆಟ್ರೋ ದರ ಹೆಚ್ಚಳಕ್ಕೆ ಆಪ್ ಆಕ್ರೋಶ

ದಿಢೀರನೆ ಶೇ 40 ರಿಂದ 45 ರಷ್ಟು ದರ ಏರಿಕೆ ಮಾಡುತ್ತಿರುವ ಬಿ ಎಂ ಆರ್ ಸಿ ಎಲ್ ಕ್ರಮವನ್ನು ಅಮ್ ಆದ್ಮಿ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
07:24 PM Jan 18, 2025 IST | ಅಮೃತ ಮೈಸೂರು
Advertisement

ಬೆಂಗಳೂರು: ಕಳೆದ ಏಳೆಂಟು ವರ್ಷಗಳಿಂದ ಮೆಟ್ರೋ ದರವನ್ನು ಏರಿಸಿಲ್ಲವೆಂಬ ಕಾರಣ ನೀಡಿ ದಿಢೀರನೆ ಶೇ 40 ರಿಂದ 45 ರಷ್ಟು ದರ ಏರಿಕೆ ಮಾಡುತ್ತಿರುವ ಬಿ ಎಂ ಆರ್ ಸಿ ಎಲ್ ಕ್ರಮವನ್ನು ಅಮ್ ಆದ್ಮಿ ಪಕ್ಷ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Advertisement

ದರ ಏರಿಕೆ ವಿರುದ್ಧ ಬೆಂಗಳೂರಿನ ನಾಗರೀಕರ ಜೊತೆಗೂಡಿ ಹೋರಾಟದ ಹಾದಿಯನ್ನು ಹಿಡಿಯಬೇಕಾಗುತ್ತದೆ ಎಂದು ಪಕ್ಷದ ರಾಜ್ಯ ಖಜಾಂಚಿ ಪ್ರಕಾಶ್
ನೆಡುಂಗಡಿ ಮಾಧ್ಯಮ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.

ಸಂಚಾರ ಒತ್ತಡ ಸಮಸ್ಯೆಯಲ್ಲಿ ವಿಶ್ವ ಮಟ್ಟದಲ್ಲಿ ಮೂರನೇ ಸ್ಥಾನವನ್ನು ಪಡೆದು , ಬೆಂಗಳೂರಿನ ಆರ್ಥಿಕ ವ್ಯವಸ್ಥೆಗೆ ಧಕ್ಕೆ ಬರುವ ರೀತಿಯ ಕಳಂಕವನ್ನು ಹೊತ್ತಿರುವ ಬೆಂಗಳೂರು ನಗರದಲ್ಲಿ ಸಾರ್ವಜನಿಕ ಸಮೂಹ ಸಾರಿಗೆ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸಿ ಸಂಚಾರ ಒತ್ತಡವನ್ನು ಕಡಿಮೆ ಮಾಡಲು ಕ್ರಮಗಳನ್ನು ತೆಗೆದುಕೊಳ್ಳದೆ ಈ ರೀತಿ ದರ ಏರಿಸಿ ಸಮೂಹ ಸಾರಿಗೆ ವ್ಯವಸ್ಥೆಯ ಕತ್ತುಹಿಸುಕುವ ಕೆಲಸಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ ಕೆಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಬಸ್ ಟಿಕೆಟ್ ಬೆಲೆಗಳನ್ನು ಏರಿಸಿ ಜನತೆಯ ಜೇಬಿಗೆ ಬರೆ ಎಳೆದಿದೆ ಎಂದು ಪ್ರಕಾಶ್
ನೆಡುಂಗಡಿ ಕಿಡಿಕಾರಿದ್ದಾರೆ‌.

ಜನಸ್ನೇಹಿ ಸಾರಿಗೆ ವ್ಯವಸ್ಥೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಮುಂದಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೂಡಲೇ ದರ ಏರಿಕೆಯ ಪ್ರಸ್ತಾಪವನ್ನು ಕೈಬಿಡಬೇಕು ಇಲ್ಲದಿದ್ದಲ್ಲಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಮೆಟ್ರೋ ಸಂಸ್ಥೆ ಹಾಗೂ ಸರ್ಕಾರದ ವಿರುದ್ಧ ತೀವ್ರ ಹೋರಾಟ ಮಾಡುತ್ತೇವೆ ಎಂದು ಪ್ರಕಾಶ್ ನೆಡುಂಗಡಿ ಎಚ್ಚರಿಸಿದ್ದಾರೆ.

Advertisement
Advertisement
Next Article