HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಮೈಸೂರಿನಲ್ಲಿ ಪೊಲೀಸರ ಪಥಸಂಚಲನ:ಹೈ ಅಲರ್ಟ್

ನಗರದಲ್ಲಿ ನಡೆದ ದರೋಡೆ ಪ್ರಕರಣಗಳು ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು,ಪಥಸಂಚಲನ ನಡೆಸಿ ಅಭಯ ನೀಡಿದರು .
05:51 PM Jan 21, 2025 IST | ಅಮೃತ ಮೈಸೂರು
Advertisement

ಮೈಸೂರು: ನಗರದಲ್ಲಿ ನಡೆದ ದರೋಡೆ ಪ್ರಕರಣಗಳು ಆತಂಕ ಸೃಷ್ಟಿಸಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು,ಪಥಸಂಚಲನ ನಡೆಸಿ ಅಭಯ ನೀಡಿದರು .

Advertisement

ನಗರದ ಹೃದಯ ಭಾಗದಲ್ಲಿರುವ ಅಶೋಕಾ ರಸ್ತೆಯಲ್ಲಿ ಪೊಲೀಸರೊಂದಿಗೆ ಪೆರೇಡ್ ಮಾಡಿದ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಸಾರ್ವಜನಿಕರಿಗೆ, ವ್ಯಾಪಾರಸ್ಥರಿಗೆ ಅಭಯ ನೀಡಿದರು.

ವಿವಿದ ಪೊಲೀಸ್ ಠಾಣೆಗಳ ನಿರೀಕ್ಷಕರು ಆಯುಕ್ತರಿಗೆ ಸಾಥ್ ನೀಡಿದರು.

ಚಿನ್ನಾಭರಣ ಅಂಗಡಿಗಳ ಭದ್ರತೆ ಹಾಗೂ ಸಿಸಿ ಕ್ಯಾಮರಾಗಳನ್ನ ಪರಿಶೀಲಿಸಿದರು.ಜ್ಯೂಯಲರಿ ಅಂಗಡಿ ಮಾಲೀಕರೊಂದಿಗೆ ಮಾತನಾಡಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಬಗ್ಗೆ ಸಲಹೆ ನೀಡಿದರು.

ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಬ್ಯಾಂಕ್ ಗಳು ಎಟಿಎಂ ಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು.

ದರೋಡೆ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್,ಡಿಸಿಪಿ ಮುತ್ತುರಾಜ್ ಹಾಗೂ ಜಾಹ್ನವಿ ಅವರ ನೇತೃತ್ವದಲ್ಲಿ ಎಲ್ಲಾ ಪೊಲೀಸ್ ಠಾಣೆಗಳ ಅಪರಾಧ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೆಲ ಸೂಚನೆಗಳನ್ನು ನೀಡಿದ್ದಾರೆ.

ಬ್ಯಾಂಕು ಗಳು ಹಾಗೂ ಉದ್ದಿಮೆಗಳ ಮೇಲೆ ವಿಶೇಷ ನಿಗಾ ವಹಿಸುವಂತೆ ತಿಳಿಸಿದ್ದಾರೆ.

Advertisement
Tags :
MysorePolice Commissioner
Advertisement
Next Article