For the best experience, open
https://m.navayuganews.com
on your mobile browser.
Advertisement

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು, ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕ್ರಮವಹಿಸ ಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹೋಮ್ ಸ್ಟೇ ಗಳಲ್ಲಿ 5 ರೂಮ್ ಗಳು ಮಾತ್ರ ಇರಬೇಕು. ನಗರ ಪ್ರದೇಶಗಳಲ್ಲಿ ಹೋಟೆಲ್ ಗಳನ್ನು ಹೋಮ್ ಸ್ಟೇ ಗಳಾಗಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

ವರುಣಾ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಟೆಂಡರ್ ನೀಡಲಾಗಿದೆ ಅದೇ ರೀತಿ ಪ್ರವಾಸಿ ಬೋಟಿಂಗ್ ವ್ಯವಸ್ಥೆ ಮಾಡಲು ಸಾಧ್ಯವಿರುವ ಎರಡು ಮೂರು ಕೆರೆಗಳನ್ನು ಗುರುತಿಸುವಂತೆ ಪ್ರವಾಸೋಧ್ಯಮ ಇಲಾಖೆಯ ಜಂಟಿ ನಿರ್ದೇಶಕರಿಗೆ ಇಲ್ಲಾಧಿಕಾರಿಗಳು ಸೂಚಿಸಿ ದರು.

ಪ್ರವಾಸೋಧ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ ಕೆ ಸವಿತಾ ಅವರು ಮಾತನಾಡಿ ಕೇಂದ್ರ ಪ್ರವಾಸೋಧ್ಯಮ ಇಲಾಖೆ ವತಿಯಿಂದ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಸೆಲ್ಪಿ ಪಾಯಿಂಟ್ ಗಳು ಹಾಗೂ ಮಾಹಿತಿ ಫಲಕಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ವರುಣಾ ಕೆರೆಯಲ್ಲಿ ಸಾಹಸ ಕ್ರೀಡೆ ಗಳು ಹಾಗೂ ಸದರಿ ಸ್ಥಳಗಳಲ್ಲಿ ಜಿಪ್ ಲೈನ್, ಸ್ಕೈ ಸೈಕಲ್ ಮತ್ತು ಜಾಯಿಂಟ್ ಸ್ವಿಂಗ್ ಎಂಬ ಹೆಚ್ಚುವರಿ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

Advertisement
Advertisement