For the best experience, open
https://m.navayuganews.com
on your mobile browser.
Advertisement

ತುಮಕೂರು: ನಮ್ಮ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದು,ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಸರ್ಕಾರದ ನಾನಾ ಯೋಜನೆಗಳ 750 ಕೋಟಿ ರೂಪಾಯಿ ಮೊತ್ತದ 23000 ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ, ಹಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಸಿಎಂ ಮಾತನಾಡಿದರು.

ಇಡೀ ದೇಶದಲ್ಲಿ ರಾಜ್ಯದ ಜಿಡಿಪಿ ನಂಬರ್ ಒನ್ ಆಗಿದೆ. ದೇಶದ ಜಿಡಿಪಿ ಇನ್ನೂ 8 ಇದ್ದರೆ ರಾಜ್ಯದ ಜಿಡಿಪಿ 10 ಕ್ಕೆ ತಲುಪಿದೆ. ವಿದೇಶಿ ಬಂಡವಾಳ ಆಕರ್ಷಣೆ ಮತ್ತು ಕೇಂದ್ರಕ್ಕೆ ತೆರಿಗೆ ಪಾವತಿಸುವುದರಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಎಲ್ಲಾ ಜಾತಿ ಮತ್ತು ಎಲ್ಲಾ ಧರ್ಮದವರ ಒಟ್ಟಾರೆ ಕೊಡುಗೆಯಿಂದ ಸಾಧ್ಯವಾಗಿದೆ ಎಂದು ಹೇಳಿದರು.

ರಾಜ್ಯದ ಪ್ರತಿಯೊಬ್ಬರಿಗೂ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯಕ್ರಮಗಳನ್ನು ನಾವು ಕೊಡುತ್ತಲೇ ಹೋಗುತ್ತೇವೆ. ಜೊತೆಗೆ ಹಿಂದುಳಿದವರ, ದುರ್ಬಲರ ಏಳಿಗೆಗೆ ವಿಶೇಷ ಯೋಜನೆಗಳನ್ನೂ ರೂಪಿಸುತ್ತೇವೆ ಎಂದು ಸಿಎಂ ಭರವಸೆ ನೀಡಿದರು.

ಹಳ್ಳಿಗಳು, ತಾಲ್ಲೂಕುಗಳು, ಜಿಲ್ಲೆಗಳ ಅಭಿವೃದ್ಧಿಯಿಂದ ಮಾತ್ರ ರಾಜ್ಯದ, ದೇಶದ ಅಭಿವೃದ್ಧಿ ಸಾಧ್ಯ.ಅದೇ ರೀತಿ
ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಜಿಡಿಪಿ ಪ್ರಗತಿ ಕಾಣಲು ಸಾಧ್ಯ ಎಂದು ಹೇಳಿದರು.

ಹೀಗಾಗಿ ನಮ್ಮ ಸರ್ಕಾರ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವಾಗ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರನ್ನೂ ಒಳಗೊಳ್ಳುವಂತೆ ರೂಪಿಸುತ್ತೇವೆ. ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿದ್ದಾಗಿದೆ. ಈ ರೀತಿ ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ, ಬೈರತಿ ಸುರೇಶ್, ಕರ್ನಾಟಕ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಸೇರಿ ಜಿಲ್ಲೆಯ ಶಾಸಕರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Tags :
Advertisement