HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಒಬ್ಬನ ಬಂಧನಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಒಬ್ಬನ ಬಂಧನ

05:41 PM Jan 13, 2025 IST | ಅಮೃತ ಮೈಸೂರು
Advertisement

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕುಯ್ದ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.

Advertisement

ಬಿಹಾರ ರಾಜ್ಯದ ಚಂಪಾರನ್ ಜಿಲ್ಲೆ ಮೂಲದವನಾದ ಶೇಕ್ ನಸ್ರು ಎಂಬಾತನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಆರೋಪಿಯನ್ನು ಜನವರಿ 24ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಘಟನೆ ನಡೆದ ಸ್ಥಳದಿಂದ 50 ಮೀಟರ್ ದೂರದಲ್ಲಿರುವ ಪ್ಲಾಸ್ಟಿಕ್ ಹಾಗೂ ಬಟ್ಟೆ ಹೊಲೆಯುವ ಅಂಗಡಿಯಲ್ಲಿ ಸಹಾಯಕನಾಗಿ ಈತ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ, ಕಾಟನ್ ​ಪೇಟೆ ಪೊಲೀಸರು ಭಾನುವಾರ ರಾತ್ರಿ ಈತನನ್ನು ಬಂಧಿಸಿದ್ದಾರೆ.

ಈ ಕೃತ್ಯದಲ್ಲಿ ಬೇರೆ ಯಾರೂ ಭಾಗಿಯಾಗಿರುವುದು ಕಂಡುಬಂದಿಲ್ಲ, ಚಿಕಿತ್ಸೆ ಬಳಿಕ ಹಸುಗಳು ಅಪಾಯದಿಂದ ಪಾರಾಗಿವೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ.

ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಒಬ್ಬನ ಬಂಧನ

Tags :
BangaluruChamarajpetCows
Advertisement
Next Article