ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ
05:29 PM Aug 06, 2024 IST
|
ಅಮೃತ ಮೈಸೂರು
Advertisement
ಬೆಂಗಳೂರು, ಆ.6: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
Advertisement
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬಳಸಿ ಅಕ್ರಮವಾಗಿ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ.
ಮೈಸೂರಿನ ಸ್ನೇಹ ಮಯಿ ಕೃಷ್ಣ ಎಂಬವರು ದಾಖಲೆ ಸಮೇತ ರಾಜ್ಯಪಾಲರಿಗೆ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದಾರೆ.
ಫಲಾನುಭವಿಗಳ ಆಶ್ರಯ ಮನೆ ಹಂಚಿಕೆಯ ಭೂಸ್ವಾಧೀನ ಮಾಡಿಕೊಂಡು ಅಕ್ರಮವಾಗಿ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ ಎಂದು ಸ್ನೇಹಮಯಿ ಕೃಷ್ಣ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
Advertisement
Next Article