ಸಿಪಿವೈ ವಿರುದ್ಧ ಅಶೋಕ್ ಆಕ್ರೋಶ
07:25 PM Oct 23, 2024 IST
|
ಅಮೃತ ಮೈಸೂರು
Advertisement
ಬೆಂಗಳೂರು: ಮಾಜಿ ಸಚಿವ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿರುವುದಕ್ಕೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಕೆಂಡಮಂಡಲರಾಗಿದ್ದಾರೆ.
Advertisement
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಶೋಕ್, ಯೋಗೇಶ್ವರ್ ಕಾಂಗ್ರೆಸ್‌ಗೆ ಸೇರ್ಪಡೆಗೊಂದು ಬಿಜೆಪಿಗೆ ದ್ರೋಹ ಬಗೆದಿದ್ದಾರೆ ಎಂದು ಕಿಡಿಕಾರಿದರು.
ಎಚ್ ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಚಿನ್ಹೆಯಡಿ ಸ್ಪರ್ಧಿಸುವಂತೆ ಆಫರ್ ನೀಡಿದರು ಕೂಡ ಯೋಗೇಶ್ವರ್ ತಿರಸ್ಕರಿಸಿ ಕಾಂಗ್ರೆಸ್ಗೆ ಹೋಗಿದ್ದಾರೆ ಅವರಿಗೆ ಕಾಂಗ್ರೆಸ್ ನಲ್ಲಿ ಭ್ರಮ ನಿರಸನ ಆಗುವುದು ಖಂಡಿತ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ನಿಂದ ಯೋಗೇಶ್ವರ್ ಸ್ಪರ್ಧಿಸಿದರು ಕೂಡ ಚನ್ನಪಟ್ಟಣದ ಜನತೆ ಅವರನ್ನು ಗೆಲ್ಲಿಸುವುದಿಲ್ಲ,ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.
Advertisement
Next Article