For the best experience, open
https://m.navayuganews.com
on your mobile browser.
Advertisement

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿ ಏಳು ಮಂದಿ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು ಬಿಗ್ ರಿಲೀಫ್ ದೊರೆತಂತಾಗಿದೆ.

Advertisement

ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲಾ ಏಳು ಆರೋಪಿಗಳಿಗೂ ಜಾಮೀನು ನೀಡಿದೆ.

ನ್ಯಾ. ವಿಶ್ವಜಿತ್‌ ಶೆಟ್ಟಿ ಅವರಿದ್ದ ಪೀಠ ಏಳು ಎಂದಿಗೂ ಜಾಮೀನು ನೀಡಿ ಆದೇಶ ಹೊರಡಿಸಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೂ.11 ರಂದು ನಟ ದರ್ಶನ್‌ ಸೇರಿ ಹಲವರು ಬಂಧನಕ್ಕೊಳಗಾಗಿದ್ದರು. ಈ ನಡುವೆ ಜೈಲಿನಲ್ಲಿ ರಾಜಾತಿಥ್ಯದ ಆರೋಪದ ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ‌ ದರ್ಶನ್ ರನ್ನು ಸ್ಥಳಾಂತರಿಸಲಾಗಿತ್ತು.

ಬೆನ್ನು ನೋವಿನ ಕಾರಣ ದರ್ಶನ್ ಗೆ ಶಸ್ತ್ರಚಿಕಿತ್ಸೆ ಅಗತ್ಯದ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಇನ್ನೂ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ.

ಈ ಮಧ್ಯೆ ಜಾಮೀನಿಗಾಗಿ ದರ್ಶನ್‌ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿತ್ತು.

Advertisement
Tags :
Advertisement