ಚುನಾವಣೆಗಾಗಿ ಬಿಜೆಪಿ ರಾಜಕೀಯ ಮಾಡುತ್ತಿದೆ- ಸಿಎಂ
07:16 PM Oct 30, 2024 IST
|
ಅಮೃತ ಮೈಸೂರು
Advertisement
ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.
Advertisement
ಮಾದ್ಯಮದವರೊಂದಿಗೆ ಮಾತನಾಡಿದ ಸಿಎಂ,ರೈತರ ಜಮೀನು ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಬಿಜೆಪಿಯವರು ಧ್ವನಿ ಎತ್ತಿದ್ದಾರೆ, ಸರ್ಕಾರ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಇದರಲ್ಲಿ ಯಾವುದೇ ವಿವಾದ ಇಲ್ಲದಿದ್ದರೂ ಬೇಕೆಂದೇ ವಿವಾದ ಹುಟ್ಟು ಹಾಕುತ್ತಿದ್ದಾರೆ ಬಿಜೆಪಿಯವರು ಎಂದು ಸಿಎಂ ಗರಂ ಆಗಿ ನುಡಿದರು.
ರೈತರಿಗೆ ನೀಡಿರುವ ನೋಟಿಸ್ ಗಳನ್ನು ವಾಪಸ್ಸು ಪಡೆಯಲಾಗುವುದು ಎಂದು ಇದೇ ವೇಳೆ ಸಿದ್ದು ತಿಳಿಸಿದರು.
Advertisement
Next Article