For the best experience, open
https://m.navayuganews.com
on your mobile browser.
Advertisement

ಬೆಂಗಳೂರು: ನಮ್ಮ ಶಾಸಕರಿಗೆ ಬಿಜೆಪಿ ಅವರು ಆಫರ್ ಕೊಡುತ್ತಿರುವುದು ನಿಜ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದು,ಸಿಎಂ ಸಿದ್ದರಾಮಯ್ಯ ಅವರ ಆರೋಪವನ್ನು ಸಮರ್ಥಿಸಿದರು.

Advertisement

ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡಲು ಬಿಜೆಪಿಯವರು 50 ಕೋಟಿ ಆಮಿಷ ಕೊಟ್ಟಿದ್ದಾರೆ ಎಂಬ ಸಿದು ಹೇಳಿಕೆ ಬಗ್ಗೆ ವಿಧಾನಸೌಧದಲ್ಲಿ ‌ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು,ನಮ್ಮ ಶಾಸಕರಿಗೆ ಬಿಜೆಪಿಯವರು 50 ಕೋಟಿ ಅಫರ್ ನೀಡುತ್ತಿದ್ದಾರೆ. ನಮ್ಮ ಶಾಸಕರ ಜೊತೆ ಬಿಜೆಪಿ ಅವರು ಮಾತಾಡಿದ್ದಾರೆ. ಅದನ್ನ ನಮ್ಮ ಶಾಸಕರು ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ. ಮಿಕ್ಕಿದ ವಿಚಾರ ನಾನು ಮುಂದೆ ತಿಳಿಸುತ್ತೇನೆ‌ ಎಂದು ಹೇಳಿದರು.

ನಮ್ಮ ಪಕ್ಷದ 50 ಶಾಸಕರಿಗೆ ತಲಾ 50 ಕೋಟಿ ಆಫರ್‌ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದರು.

Advertisement
Tags :
Advertisement