HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗೋನಲ್ಲಾ,ಕೈ ಕಟ್ಟಿ ಕೂರೋನಲ್ಲ-ಸಿದ್ದು

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆಶಿ ಕೈ ಕುಲುಕಿ ಸ್ವಾಗತಿಸಿದರು
07:22 PM Aug 09, 2024 IST | ಅಮೃತ ಮೈಸೂರು
Advertisement

ಮೈಸೂರು ಆ 9: ನಾನು ಯಾವುದೇ ಕಾರಣಕ್ಕೂ ಬಿಜೆಪಿ-ಜೆಡಿಎಸ್ ಷಡ್ಯಂತ್ರಕ್ಕೆ ಬಲಿಯಾಗೋನಲ್ಲಾ,,ಕೈ ಕಟ್ಟಿ ಕೂರೋನೂ ಅಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಗುಡುಗಿದರು.

Advertisement

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಸಿಎಂ ಮಾತನಾಡಿದರು.

ಈ ನೆಲದ ಶೋಷಿತರು, ಶ್ರಮಿಕರು, ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಪರವಾಗಿ ನಾನು ಇದ್ದೇನೆ, ಇವರ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎಂಬ ಕಾರಣಕ್ಕೆ ನನ್ನನ್ನು ಕೆಳಗಿಳಿಸುವ ಹುನ್ನಾರ ನಡೆಸುತ್ತಿದ್ದಾರೆ ಇದಕ್ಕೆ ನಮ್ಮ ನಾಡಿನ‌ ಜನತೆ ಅವಕಾಶ ಕೊಡುವುದಿಲ್ಲ ಎಂಬ ನಂಬಿಕೆ ನನಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ, ಜೆಡಿಎಸ್ ಎಷ್ಟೇ ಕಪಟ ಉದ್ದೇಶದಿಂದ ಪಾದಯಾತ್ರೆ ನಡೆಸಿದರೂ ನಾನು ಹೆದರುವುದಿಲ್ಲ ಎಂದು ಹೇಳಿದರು.

ರಾಜಭವನ ಮತ್ತು ಕೇಂದ್ರ ಸರ್ಕಾರ ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಬೆದರುವುದಿಲ್ಲ, ನಾನು ಇವರ ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ ಸಿದ್ದರಾಮಯ್ಯ ಕಡಕ್ಕಾಗಿ ನುಡಿದರು.

ಸಮಾವೇಶದಲ್ಲಿ ಭಾಗವಹಿಸಿದ್ದ ಅಭಿಮಾನಿಯೊಬ್ಬರು ತಮ್ಮ ಹೊಟ್ಟೆಯ ಮೇಲೆ ಸಿಎಂ ಸಿದ್ದರಾಮಯ್ಯ,ಸಿಎಂ ಸಿದ್ದು,ಡಿಕೆಸಿ, ಹುಲಿಯ ಕೈ ಲೋಗೊ ಹಾಗೂ ಹಣೆಯ ಮೇಲೆ ಬಾವುಟದ ಚಿನ್ಹೆ ಹೀಗೆ ಬರೆದುಕೊಂಡು ಕೈನಲ್ಲಿ ಬಾವುಟ ಹಿಡಿದು ತಮ್ಮ ಅಭಿಮಾನ ತೋರಿಸಿದ್ದು ಎಲ್ಲರ ಗಮನ ಸೆಳೆಯಿತು. ಸಮಾವೇಶದಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಸಚಿವರು, ಶಾಸಕರು, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

Advertisement
Tags :
CM SiddaramiahCongressJanandolanaMysore
Advertisement
Next Article