For the best experience, open
https://m.navayuganews.com
on your mobile browser.
Advertisement

ಹುಬ್ಬಳ್ಳಿ: ಬಿಜೆಪಿಯವರು ನಿರಾಧಾರವಾದ ವಿಚಾರಗಳ ಬಗ್ಗೆಯೇ ಹೋರಾಟ ಮಾಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು.

Advertisement

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ, ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸಿದ ಕುರಿತು‌ ಪ್ರತಿಕ್ರಿಯಿಸಿ,
ಸುಳ್ಳು ಮೊಕದ್ದಮೆಗಳು, ಹೋರಾಟಗಳನ್ನು ಕಾರಣವಾಗಿಸಿ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ಪ್ರಕರಣಗಳನ್ನು ವಾವಸ್ಸು ಪಡೆಯಲು ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದರು.

ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ ಅಧಿಕಾರವಧಿಯಲ್ಲಿಯೂ ಅಸ್ತಿತ್ವದಲ್ಲಿತ್ತು. ಅಂತೆಯೇ ಹುಬ್ಬಳ್ಳಿ ಗಲಭೆ ಪ್ರಕರಣ ಸುಳ್ಳು ಪ್ರಕರಣವೆಂದು ನಿರ್ಧರಿಸಿ ಪ್ರಕರಣವನ್ನು ವಾಪಸ್ಸು ಪಡೆಯಲಾಗಿದೆ.

ಈ ತೀರ್ಮಾನವನ್ನು ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ. ಇದೇ ರೀತಿ ಬಿಜೆಪಿಯವರ ವಿರುದ್ಧದ ಪ್ರಕರಣಗಳನ್ನೂ ಸಹ ವಾಪಸ್ಸು ಪಡೆಯಲಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

Advertisement
Tags :
Advertisement