ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ
06:38 PM Aug 05, 2024 IST
|
ಅಮೃತ ಮೈಸೂರು
Advertisement
ಬೆಂಗಳೂರು, ಆ.5: ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ
ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆ ಮಾಡಿಕೊಂಡಿದ್ದು, ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
Advertisement
ಚನ್ನಪಟ್ಟಣ ತಾಲೂಕು ಎಲೆ ತೋಟದಹಳ್ಳಿ ಬಳಿಯ ಕರ್ಲಹಳ್ಳಿ ನಿವಾಸಿಯಾಗಿದ್ದ ಅವರು
ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು, ಆದರೆ ಇವರ ಕುಟುಂಬ ಮೈಸೂರಿನಲ್ಲಿ ನೆಲೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಎರಡು ತಿಂಗಳ ಹಿಂದೆಯಷ್ಟೇ ತಿಮ್ಮೇಗೌಡ ಸಿಸಿಬಿಗೆ ವರ್ಗಾವಣೆಯಾಗಿದ್ದರು.
ಕುಂಬಳಗೂಡು ಸಮೀಪದ ತಗಚಗುಪ್ಪೆ ಜಮೀನಿನಲ್ಲಿ ತಿಮ್ಮೇಗೌಡ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಕಗ್ಗಲಿಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Advertisement
Next Article