HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಹುತಾತ್ಮ ಯೋಧರ ಕುಟುಂಬಕ್ಕೆ ನೆರವು: ಸಿಎಂ ಘೋಷಣೆ

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಸಿಎಂ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.
05:50 PM Dec 26, 2024 IST | ಅಮೃತ ಮೈಸೂರು
Advertisement

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರ ಕುಟುಂಬಕ್ಕೆ ಸರ್ಕಾರ ನೆರವು ನೀಡಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

Advertisement

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.

ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದು ತಿಳಿಸಿದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ಭರವಸೆ ನೀಡಿದರು.

ನಾಲ್ಕು ಮಂದಿ ಯೋದರುಗಳಾದ
ದಯಾನಂದ ತಿರುಕಣ್ಣನವರ್ ಬೆಳಗಾವಿ,
ಧನರಾಜ್ ಸುಭಾಷ್ ಚಿಕ್ಕೋಡಿ,
ಮಹೇಶ್ ನಾಗಪ್ಪ ಬಾಗಲಕೋಟೆ,
ಅನೂಪ್ ಪೂಜಾರಿ ಕುಂದಾಪುರ
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಸಿಎಂ ಪ್ರಾರ್ಥಿಸಿದರು

Advertisement
Tags :
BelagaviMartyred Warriors
Advertisement
Next Article