For the best experience, open
https://m.navayuganews.com
on your mobile browser.
Advertisement

ನವದೆಹಲಿ: ಜಮ್ಮು- ಕಾಶ್ಮೀರದ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ.

Advertisement

ಜಮ್ಮು-ಕಾಶ್ಮೀರದಲ್ಲಿ‌ ಹತ್ತು ವರ್ಷಗಳ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದ್ದು, ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಾಡದ ಬಳಿಕ ಆಯ್ಕೆಯಾದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣವಚನ ಬೋಧಿಸಿದರು.

ಒಮರ್ ಅಬ್ದುಲ್ಲಾ ಜೊತೆಗೆ ಶಾಸಕರಾದ ಸತೀಶ್ ಶರ್ಮಾ (ಸ್ವತಂತ್ರ), ಸಕಿನಾ ಇಟೂ, ಜಾವಿದ್ ದಾರ್, ಸುನ್ರಿಂದರ್ ಚೌಧರಿ ಮತ್ತು ಜಾವಿದ್ ರಾಣಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿ ಇಂಡಿಯಾ ಒಕ್ಕೂಟದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.

ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು 90 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲ್ ಕಾನ್ಫರೆನ್ಸ್ 42 ಸ್ಥಾನಗಳನ್ನು ಗೆದ್ದರೆ‌ ಕಾಂಗ್ರೆಸ್ 6 ಸ್ಥಾನಗಳನ್ನು ಮಾತ್ರ ಪಡೆದುಕೊಂಡಿದೆ.

Advertisement
Tags :
Advertisement