HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ ಸದಸ್ಯರ ಆಕ್ರೋಶ

ವಿಧಾನಸಭೆ ಕಲಾಪದ ವೇಳೆ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
07:06 PM Dec 19, 2024 IST | ಅಮೃತ ಮೈಸೂರು
Advertisement

ಬೆಳಗಾವಿ: ವಿಧಾನಸಭೆ ಕಲಾಪದ ವೇಳೆ ಕಾಂಗ್ರೆಸ್‌ ಶಾಸಕರು ಅಂಬೇಡ್ಕರ್‌ ಭಾವಚಿತ್ರ ಪ್ರದರ್ಶಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಅಮಿತ್‌ ಶಾ ಹೇಳಿಕೆ ಖಂಡಿಸಿದ ಕಾಂಗ್ರೆಸ್ ಸದಸ್ಯರು ಚರ್ಚೆಗೆ ಆಗ್ರಹಿಸಿ, ನಿರ್ಣಯ ಕೈಗೊಳಲು ಒತ್ತಾಯಿಸಿದರು.

ಸದನದಲ್ಲಿ ಒಟ್ಟಾಗಿ ನಿಂತು ಅಂಬೇಡ್ಕರ್ ಫೊಟೋ ಹಿಡಿದು ಕಾಂಗ್ರೆಸ್ ಸದಸ್ಯರು ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಬಿಜೆಪಿಯವರು ಕಾಂಗ್ರೆಸ್‌ನಿಂದಲೇ ಅಂಬೇಡ್ಕರ್‌ ಅವರಿಗೆ ಅನ್ಯಾಯವಾಗಿದೆ ಎಂದು ಹೇಳಿ ಪ್ರತಿಭಟಿಸಿದರು.

ಈ ವೇಳೆ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪ್ರದರ್ಶಿಸಿದ ಅಂಬೇಡ್ಕರ್ ಭಾವಚಿತ್ರವನ್ನೇ ತೆಗೆದುಕೊಂಡು ಕಾಂಗ್ರೆಸ್ ವಿರುದ್ಧವೇ ಬಿಜೆಪಿ ಶಾಸಕ ಗುರುರಾಜ್ ಗಂಟಿಹೊಳೆ‌ ಪ್ರದರ್ಶಿಸಿ ವ್ಯಂಗ್ಯವಾಡಿದರು.

ಈ ವೇಳೆ ಯಾರೊಬ್ಬರ ಮಾತೂ ಕೇಳದಂತೆ ಗದ್ದಲವಾಯಿತು,ಗದ್ದಲ ಜೋರಾಗುತ್ತಿದ್ದಂತೆ ಸ್ಪೀಕರ್‌ ಕೆಲಕಾಲ ಕಲಾಪ ಮುಂದೂಡಿದರು.

Advertisement
Tags :
Belagavi Suvarna Vidhana Sowdha
Advertisement
Next Article