HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ದರ್ಶನ್‌, ಪವಿತ್ರಾ ಗೌಡಗೆ ಸಿಗಲಿಲ್ಲ ಜಾಮೀನು

05:53 PM Oct 14, 2024 IST | ಅಮೃತ ಮೈಸೂರು
Advertisement

ಬೆಂಗಳೂರು: ನಟ ದರ್ಶನ್‌ ಮತ್ತು ಪವಿತ್ರಾ ಗೌಡ ಕಡೆಗೂ ಜಾಮೀನು ಸಿಗಲಿಲ್ಲ.
ಇವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 57ನೇ ಸಿಸಿಎಚ್‌ ಕೋರ್ಟ್ ವಜಾಗೊಳಿಸಿದೆ.

Advertisement

ಎರಡೂ ಕಡೆಯವರ ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶ ಜೈಶಂಕರ್ ಅವರು ಅ.10 ರಂದು ವಿಚಾರಣೆ ಪೂರ್ಣಗೊಳಿಸಿ ಅ. 14ಕ್ಕೆ ಜಾಮೀನು ಅರ್ಜಿ ಸಂಬಂಧ ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದರು.

ರೇಣುಕಾಸ್ವಮಿ ಕೊಲೆ ಪ್ರಕರಣದಲ್ಲಿ ಜೂನ್‌ 11ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು, ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ ಪರ ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಆಗಿ ಪ್ರಸನ್ನಕುಮಾರ್‌ ಅವರು ವಾದ ಮಂಡಿಸಿದರು.

ದರ್ಶನ್‌ ಪರ ಹಿರಿಯ ಕ್ರಿಮಿನಲ್ ಲಾಯರ್ ಸಿ.ವಿ.ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.

ದರ್ಶನ್ ಸೇರಿ ನಾಲ್ವರಿಗೆ ಜಾಮೀನು ಮಂಜೂರು ಮಾಡಬಾರದೆಂದು ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ್ದರು.

ಕಡೆಗೂ ದರ್ಶನ್ ಹಾಗೂ ಪವಿತ್ರಾಗೆ ಜೈಲೇ ಗತಿಯಾಗಿದೆ.

Advertisement
Tags :
BangsluruDarshanPavitra Gowda
Advertisement
Next Article