HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಬಾಣಂತಿಯರ ಸಾವು; ವರದಿ ಬಂದ ನಂತರ ಸೂಕ್ತ ಕ್ರಮ:ಮುಖ್ಯಮಂತ್ರಿ

ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು.
05:22 PM Dec 07, 2024 IST | ಅಮೃತ ಮೈಸೂರು
ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿದರು.
Advertisement

ಚಾಮರಾಜನಗರ: ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಸಂಬಂಧ ಪರಿಶೀಲಿಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಚಾಮರಾಜನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಮಿಸಿದ ವೇಳೆ ನರಿಪುರ ಗ್ರಾಮದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Advertisement

ಅಭಿವೃದ್ಧಿ ಆಯುಕ್ತರ ಸಮಿತಿಗೆ ವರದಿ ಸಲ್ಲಿಸಲು ಸೂಚಿಸಲಾಗಿದೆ, ವರದಿ ಬಂದ ನಂತರ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಳ್ಳಾರಿ ಆಸ್ಪತ್ರೆಗೆ ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಸಿಎಂ ತಿಳಿಸಿದರು.

ಬಳ್ಳಾರಿ ಆಸ್ಪತ್ರೆಯ ಮೇಲೆ ಇಂದು ಲೋಕಾಯುಕ್ತ ದಾಳಿಯಾಗಿದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ, ನಾಲ್ಕು ಬಾಣಂತಿಯರು ಮರಣ ಹೊಂದಿದಾಗ ಸಭೆ ಕರೆಯಲಾಗಿತ್ತು,ಐದನೇ ಬಾಣಂತಿ ಮೃತಪಟ್ಟಿರುವ ಬಗ್ಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿದೆ, ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿರುವ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ, ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Advertisement
Tags :
BallariChamarajnagarCM Siddaramaiah
Advertisement
Next Article