For the best experience, open
https://m.navayuganews.com
on your mobile browser.
Advertisement

ಬೆಂಗಳೂರು: ಸರ್ಕಾರ ಬ್ರ್ಯಾಂಡ್‌ ಬೆಂಗಳೂರಿಗಿಂತ ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ವ್ಯಂಗ್ಯ ವಾಗಿ ಹೇಳಿದರು.

Advertisement

ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರನ್ನು ಮಾತನಾಡಿಸಿ ನಂತರ ಮಾಧ್ಯಮದೊಂದಿಗೆ ಮಾತನಾಡಿದರು.

ಕಾಂಗ್ರೆಸ್‌ ಸರ್ಕಾರ ಬಂದ ನಂತರ ಬ್ರ್ಯಾಂಡ್‌ ಬೆಂಗಳೂರು ಎಂಬ ಹೆಸರು ಹುಟ್ಟುಹಾಕಿದೆ, ಆದರೆ ನಗರದಲ್ಲಿ ದಿನಕ್ಕೊಂದು ಅವಘಡ ಸಂಭವಿಸುತ್ತಿದೆ. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿತದು ಎಂಟು ಅಮಾಯಕರು ಮೃತ‌ ಪಟ್ಟಿದ್ದಾರೆ. ಇಲ್ಲಿನ 20 ಅಡಿ ರಸ್ತೆಗೆ ಹೆಚ್ಚೆಂದರೆ 3 ಮಹಡಿ ನಿರ್ಮಿಸಬಹುದು. ಆದರೆ 7 ಮಹಡಿ ನಿರ್ಮಿಸಲು ಹೊರಟಿದ್ದರಿಂದ ಅವಘಡ ನಡೆದಿದೆ. ಬಿಬಿಎಂಪಿ ಅಧಿಕಾರಿಗಳು ಇದನ್ನು ಸರಿಯಾಗಿ ನಿರ್ವಹಣೆ ಮಾಡಿದ್ದರೆ ಎಲ್ಲವೂ ಸರಿ ಇರುತ್ತಿತ್ತು ಎಂದು ಕಿಡಿಕಾರಿದರು.

ಕಾಂಗ್ರೆಸ್‌ ಸರ್ಕಾರ ಇಂತಹ ಯಾವುದೇ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೆಲ ತಿಂಗಳ ಹಿಂದೆ ವಿದ್ಯುತ್‌ ತಂತಿ ತಗುಲಿ ತಾಯಿ ಮತ್ತು ಮಗು ಮೃತಪಟ್ಟಾಗ ಅದಕ್ಕೆ ಇಲಿ ಕಾರಣ ಎಂದು ಹೇಳಿದ್ದರು. ಮಳೆ ನೀರಿನಲ್ಲಿ ಮಗು ಕೊಚ್ಚಿಕೊಂಡು ಹೋಗಿರುವುದು, ಮರ ಬೀಳುವುದರಿಂದ ಅನಾಹುತ ಮೊದಲಾದವು ಬ್ರ್ಯಾಂಡ್‌ ಬೆಂಗಳೂರಿನ ಮಹಿಮೆಯಿಂದ ಆಗುತ್ತಿದೆ ಎಂದು ಅಶೋಕ್ ಟೀಕಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬರುವ ರಸ್ತೆಯ ಎರಡೂ ಬದಿ ಕಸದ ರಾಶಿ ಬಿದ್ದಿದೆ, ಅಂದರೆ ಉಪ ಮುಖ್ಯಮಂತ್ರಿಯಾಗಲೀ, ಮುಖ್ಯಮಂತ್ರಿಯಾಗಲಿ, ಇಲ್ಲಿ ಯಾರಿಗೂ ಬೆಲೆ ಇಲ್ಲ.

Advertisement
Tags :
Advertisement