HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ದಸರಾ ದೀಪಾಲಂಕಾರದಲ್ಲಿ ಡ್ರೋನ್ ಪ್ರದರ್ಶನ

ಮೈಸೂರು ದಸರಾ ಮಹೋತ್ಸವ ದೀಪಾಲಂಕಾರದ ಪೋಸ್ಟರ್ ಗಳನ್ನು ಚೆಸ್ಕ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಬಿಡುಗಡೆ ಮಾಡಿದರು.
12:58 PM Sep 24, 2024 IST | ಅಮೃತ ಮೈಸೂರು
Advertisement

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರೆಯ ದೀಪಾಲಂಕಾರಕ್ಕೆ ಈ ಬಾರಿ ಡ್ರೋನ್ ಪ್ರದರ್ಶನ ಹೊಸ ಮೆರಗು ನೀಡಲಿದೆ.

Advertisement

ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದೀಪಾಲಂಕಾರದ ಪೋಸ್ಟರ್ ಗಳನ್ನು ಚೆಸ್ಕ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಸಚಿವರು ಈ ಬಾರಿ ದೀಪಾಲಂಕಾರಕ್ಕೆ ಡ್ರೋಣ್ ಮೆರಗು ನೀಡಲಿದೆ, 1500 ಡ್ರೋನ್ ಗಳು ಆಗಸದಲ್ಲಿ ಚಿತ್ತಾರ ಮೂಡಿಸಿ ಜನಮನ ಸೂರೆಗೊಳ್ಳಲಿದೆ ಎಂದು ತಿಳಿಸಿದರು.

ದಸರಾ ದೀಪಾಲಂಕಾರ ಪ್ರಮುಖ ಆಕರ್ಷಣೆಯಾಗಿದ್ದು, 21 ದಿನದಗಳ ಕಾಲ ಮೈಸೂರು ನಗರವನ್ನು ಬೆಳಗಲಿದೆ. ಈ ಬಾರಿಯ ದೀಪಾಲಂಕಾರವನ್ನು ಅತ್ಯಂತ ಆಕರ್ಷಣೀಯಗೊಳಿಸಲು ಸೆಸ್ಕ್‌ ಅಧಿಕಾರಿಗಳ ತಂಡ ಸಾಕಷ್ಟು ಮುತುವರ್ಜಿ ವಹಿಸಿದೆ ಎಂದು ಹೇಳಿದರು.

ಒಟ್ಟು 130 ಕಿ.ಮೀ. ದೀಪಾಲಂಕಾರ ಮಾಡುತ್ತಿದ್ದು, 100 ವೃತ್ತಗಳನ್ನು ಅಲಂಕರಿಸುವುದರ ಜತೆಗೆ 65 ಪ್ರತಿಕೃತಿಗಳನ್ನು ನಿರ್ಮಿಸಲಾಗುತ್ತಿದೆ.

ಎಲ್.ಇ.ಡಿ. ಬಲ್ಪ್‌ಗಳನ್ನು ಅಳವಡಿಸಿರುವ ಸುಮಾರು 1500 ಡೋನ್‌ಗಳನ್ನು ಬಳಸಿ ಆಕಾಶದಲ್ಲಿ ಅದ್ಭುತ ವಿನ್ಯಾಸಗಳನ್ನು ಮೂಡಿಸಲಾಗುವುದು.

ಅಕ್ಟೋಬರ್‌ 6, 7ರಂದು ಹಾಗೂ 11, 12ರಂದು ರಾತ್ರಿ 8 ಗಂಟೆಯಿಂದ 8.15ರವರೆಗೆ ಡ್ರೋನ್‌ ಪ್ರದರ್ಶನ ನಡೆಯಲಿದ್ದು ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಅ. 6 ಮತ್ತು 7ರಂದು ಡ್ರೋನ್‌ ಪ್ರದರ್ಶನ ವೀಕ್ಷಿಸಲು ಉಚಿತ ಪ್ರವೇಶವಿರುತ್ತದೆ ಎಂದು ಸಚಿವರು ತಿಳಿಸಿದರು.

ನಿಗಮದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಮಾತನಾಡಿ, ವಾರಣಾಸಿ, ಹರಿದ್ವಾರಗಳಲ್ಲಿ ಡ್ರೋನ್‌ ಪ್ರದರ್ಶನ ನೀಡಿರುವ ಕಂಪನಿಯ ಮೂಲಕ ಈ ಪ್ರದರ್ಶನ ನಡೆಸುತ್ತಿದ್ದು, 10-15 ವಿನ್ಯಾಸಗಳನ್ನು ಪ್ರದರ್ಶನ ಮಾಡಲಾಗುವುದು. ಈ ಬಾರಿ ದಸರಾ ದೀಪಾಲಂಕಾರವನ್ನು ವಿಭಿನ್ನವಾಗಿ ನಡೆಸಲು ನಿಗಮದ ವತಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಜತೆಗೆ ಸುರಕ್ಷತೆಗೂ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ವಿಭಾಗದ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು, ಸೆಸ್ಕ್‌ ಹಣಕಾಸು ನಿರ್ದೇಶಕ ಶೇಖ್ ಮಹೀಮುಲ್ಲಾ, ಅಧೀಕ್ಷಕ ಇಂಜಿನಿಯರ್ ಸುನೀಲ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Next Article