ದಸರಾ ಜಂಬೂ ಸವಾರಿ ಪುಷ್ಪಾರ್ಚನೆ ತಾಲೀಮು ಯಶಸ್ವಿ
ಜಂಬೂ ಸವಾರಿ ಮೆರವಣಿಗೆಗೆ ಪೂರ್ವಭಾವಿ ತಾಲೀಮು ನಡೆಸಲಾಯಿತು
08:04 PM Oct 10, 2024 IST
|
ಅಮೃತ ಮೈಸೂರು
Advertisement
ಮೈಸೂರು: ಜಂಬೂ ಸವಾರಿ ಮೆರವಣಿಗೆಗೆ ಅಕ್ಟೋಬರ್ 12ರ ಸಂಜೆ 4ರಿಂದ 4.30ರ ಶುಭ ಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ನಡೆಯಲಿದ್ದು ಇದಕ್ಕೆ ಪೂರ್ವಭಾವಿ ತಾಲೀಮು ನಡೆಸಲಾಯಿತು
Advertisement
ಇಂದು ಬೆಳಗ್ಗೆ ಅರಮನೆ ಮುಂಭಾಗದಲ್ಲಿ ದಸರಾ ಜಂಬೂ ಸವಾರಿಯ ಪುಷ್ಪಾರ್ಚನೆಯ ತಾಲೀಮನ್ನು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ನಡೆಸಿದವು.
ತಾಲೀಮಿನಲ್ಲಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊರುವ ಅಭಿಮನ್ಯು, ಹಾಗೂ ಕುಮ್ಕಿ ಆನೆಗಳಾದ ಹಿರಣ್ಯ ಮತ್ತು ಲಕ್ಷ್ಮೀ, ಅಶ್ವಾರೋಹಿ ದಳ, ಪೊಲೀಸ್ ಬ್ಯಾಂಡ್, ಪೊಲೀಸ್ ತುಕಡಿಗಳು ಭಾಗವಹಿಸಿದ್ದವು.
ಪುಷ್ಪಾರ್ಚನೆ ಮಾಡುವ ಸ್ಥಳದಿಂದ ಗಜಪಡೆ ಹಾಗೂ ಅಶ್ವಾರೋಹಿ ದಳದ ಜತೆಗೆ ಪೊಲೀಸ್ ಬ್ಯಾಂಡ್ ಸಾಗುವ ತಾಲೀಮು ಕೂಡಾ ನಡೆಯಿತು.
ಈ ವೇಳೆ ಡಿಸಿಎಫ್ ಡಾ.ಪ್ರಭುಗೌಡ ಮಾತನಾಡಿ, ನಾಡಹಬ್ಬ ದಸರಾ ನಿಮಿತ್ತ ಗಜಪಡೆಗೆ ಎಲ್ಲ ತಾಲೀಮು ಮುಗಿಸಲಾಗಿದ್ದು, ಕೊನೆಯ ಹಂತದ ಪುಷ್ಪಾರ್ಚನೆ ತಾಲೀಮನ್ನು ನಡೆಸಲಾಯಿತು ಎಂದು ತಿಳಿಸಿದರು.
Advertisement
Next Article