HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಸಂವಿಧಾನದ ಆಶಯಗಳನ್ನು ಎಲ್ಲರೂ ತಿಳಿದಿರಬೇಕು: ಡಿಸಿ ಲಕ್ಷ್ಮೀಕಾಂತ ರೆಡ್ಡಿ

05:47 PM Oct 05, 2024 IST | ಅಮೃತ ಮೈಸೂರು
Advertisement

ಮೈಸೂರು: ಸಂವಿಧಾನವು ನಮ್ಮ ದೇಶದ ಕಾನೂನು,ಅದರ ಮೂಲ ಆಶಯಗಳನ್ನು ಎಲ್ಲರೂ ತಿಳಿದುಕೊಂಡಿರಬೇಕು ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

Advertisement

ಮೈಸೂರು ವಿಶ್ವ ವಿದ್ಯಾನಿಲಯದ ನಾಲ್ವಡಿ ಕೃಷ್ಣರಾಜ ಒಡೆಯರ್ ಸಭಾಂಗಣ, ಸೆನೆಟ್ ಭವನದಲ್ಲಿ ದಸರಾ ರಾಷ್ಟ್ರೀಯ ಸಮ್ಮೇಳನ ಉಪಸಮಿತಿ, ಜಿಲ್ಲಾಡಳಿತ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ಸಂವಿಧಾನ ಅಂಗಿಕಾರದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪ್ರಭುತ್ವ ಮತ್ತು ಸಂವಿಧಾನ ಆಶಯ ಕುರಿತ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಅಕ್ಟೋಬರ್ 3 ರಿಂದ 12 ರವರೆಗೆ ದಸರಾ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಈ ಸಂದರ್ಭದಲ್ಲಿ ಸಂವಿಧಾನ ಕುರಿತ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಸಂವಿಧಾನದ ಬಗ್ಗೆ ಪ್ರತಿಯೊಬ್ಬರೂ ಅರಿವು ಮೂಡಿಸಿಕೊಳ್ಳಬೇಕು. ಈ ಕಾರ್ಯಕ್ರಮದ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾದ ಮನೋಜ್ ಮಿತ್ತ ಅವರು ಮಾತನಾಡಿ ಭಾರತದ ಸಂವಿಧಾನವು ವಾಕ್ ಸ್ವತಂತ್ರ್ಯವನ್ನು ಆರ್ಟಿಕಲ್ 19(1) ರಲ್ಲಿ ನೀಡಿದೆ. ಸಂವಿಧಾನವು ಭಾರತೀಯ ಪ್ರಜೆಗಳಿಗೆ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನೀಡಿದೆ. ಭಾರತ ಸಂವಿಧಾನವು ವಿಶ್ವದಲ್ಲಿ ಶ್ರೇಷ್ಠ ಸಂವಿಧಾನವಾಗಿದೆ. ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಕೊಡುಗೆಯನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಎಂ ಗಾಯತ್ರಿ, ಪ್ರೊ ನಿರಂಜನ್, ಪ್ರೊ ಸೋಮಶೇಖರ್, ವಿಜಯ್ ಕುಮಾರ್ ಹೆಚ್. ಬಿ, ಪ್ರೊ ಸುದೀರ್ ಕೃಷ್ಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

Advertisement
Tags :
ConstitutionMysore
Advertisement
Next Article