For the best experience, open
https://m.navayuganews.com
on your mobile browser.
Advertisement

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ವಿಧಿವಶರಾಗಿದ್ದಾರೆ.

Advertisement

ಮನಮೋಹನ್ ಸಿಂಗ್ ಅವರಿಗೆ 92 ವರ್ಷಗಳಾಗಿತ್ತು.ತೀವ್ರ ಉಸಿರಾಟದ ತೊಂದರೆ ಇದ್ದುದರಿಂದ ಅವರನ್ನು ರಾತ್ರಿ 8 ಗಂಟೆ ಸುಮಾರಿಗೆ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು

ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಏಮ್ಸ್ ಆಸ್ಪತ್ರೆಯತ್ತ ಕಾಂಗ್ರೆಸ್ ನಾಯಕರು ದೌಡಾಯಿಸಿದ್ದಾರೆ. ಸೋನಿಯಾ ಗಾಂಧಿ, ಪ್ರಿಯಾಂಕಾ ವಾದ್ರಾ ಅವರು ಅಂತಿಮ ದರ್ಶನಕ್ಕೆ ತೆರಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಬೆಳಗಾವಿಯಿಂದ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.

ಮನಮೋಹನ್ ಸಿಂಗ್ ಅವರು
2004 ರಿಂದ 2014ರವರೆಗೂ ಭಾರತದ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು,
ಅವರು ದೇಶದ ಹಣಕಾಸು ಸಚಿವರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ. 1991ರಲ್ಲಿ ಪಿ.ವಿ ನರಸಿಂಹ ರಾವ್ ಅವರ ಸರ್ಕಾರದಲ್ಲಿ ಮೊದಲ ಬಾರಿಗೆ ವಿತ್ತ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು.

Advertisement
Tags :
Advertisement