ಫೆ.5ರಂದು ದೆಹಲಿ ವಿಧಾನಸಭೆಗೆ ಚುನಾವಣೆ
05:22 PM Jan 07, 2025 IST
|
ಅಮೃತ ಮೈಸೂರು
Advertisement
ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಫೆ.5 ರಂದು ಚುನಾವಣೆ ನಡೆಯಲಿದೆ.
ಈ ಕುರಿತು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ದೆಹಲಿ ವಿಧಾನಸಭೆಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಫೆ.8 ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.
Advertisement
70 ಸದಸ್ಯ ಬಲದ ದಿಲ್ಲಿ ವಿಧಾನಸಭೆಯ ಅವಧಿ ಫೆ.23ರಂದು ಅಂತ್ಯಗೊಳ್ಳಲಿದೆ.
ಆಮ್ ಆದ್ಮಿ ಪಕ್ಷ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಅರವಿಂದ್ ಕೇಜ್ರಿವಾಲ್ ಚುನಾವಣೆ ಗೆದ್ದು ಮತ್ತೆ ಸಿಎಂ ಹುದ್ದೆಗೇರುವ ತವಕದಲ್ಲಿದ್ದಾರೆ. ಅರವಿಂದ್ ಕೇಜ್ರಿವಾಲ್ ನವದೆಹಲಿ ಕ್ಷೇತ್ರದಿಂದ ಹಾಗೂ ಹಾಲಿ ಸಿಎಂ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಬಿಜೆಪಿ 29 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು,ಕಾಂಗ್ರೆಸ್ 48 ಅಭ್ಯರ್ಥಿಗಳನ್ನು ಘೋಷಿಸಿದ್ದು, ಮತ್ತೊಂದು ಪಟ್ಟಿ ಹೊರಬೇಕಿದೆ.
Advertisement
Next Article