HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸಿದ ಜಿ.ಟಿ.ಡಿ

04:43 PM Oct 03, 2024 IST | ಅಮೃತ ಮೈಸೂರು
Advertisement

ಮೈಸೂರು: ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಪರಾಧ ಮಾಡಿಲ್ಲ, ರಾಜೀನಾಮೆ‌ ಕೊಡಿ,ಕೊಡಿ ಎಂದು ಏಕೆ ಪೀಡಿಸುವಿರಿ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದು ಪರ ಬ್ಯಾಟಿಂಗ್ ಬೀಸಿ ಸ್ವಪಕ್ಷಕ್ಕೇ ಟಾಂಗ್ ನೀಡಿದರು.

Advertisement

ಮೈಸೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ವೇಳೆ ಜಿ.ಟಿ.ದೇವೇಗೌಡ ಅವರು‌ ಮುಖ್ಯ ಮಂತ್ರಿ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಬೀಸುವ ಮೂಲಕ ದೋಸ್ತಿಗಳಿಗೆ ಶಾಕ್ ನೀಡಿದರು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ, ಜೆಡಿಎಸ್ ದೋಸ್ತಿ ನಾಯಕರಿಗೆ ಬಿಸಿ ಮುಟ್ಟಿಸಿದರು.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ರಾಜೀನಾಮೆ ಕೋಡೋದೆ ಆದರೆ ಎಫ್ಐಆರ್ ಆಗಿರೋ ಎಲ್ಲಾ ನಾಯಕರು ಕೊಡಲಿ. ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಯೂ ಕೊಡಲಿ ಎಂದು ಹೇಳುವ ಮೂಲಕ ಸ್ವಪಕ್ಷದ ನಾಯಕ ಕುಮಾರಸ್ವಾಮಿಗೆ ಟಾಂಗ್ ನೀಡಿದರು.

ಎಲ್ಲಾ ಗಾಜಿನ ಮನೆಯಲ್ಲಿ ಕೂತಿದ್ದಾರೆ
ರಾಜೀನಾಮೆ ಕೊಡಿ,ರಾಜೀನಾಮೆ ಕೊಡಿ ಎಂದು ಒಂದೇ‌ ಸಮನೆ ಕೇಳುತ್ತಿದ್ದಾರಲ್ಲಾ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ನ್ಯಾಯಾಲಯ ಹೇಳಿದೆಯಾ, ಕೇಂದ್ರದಲ್ಲಿ ಮಂತ್ರಿ ಆದವರಿಗೆ ಜವಾಬ್ದಾರಿ ಬೇಡವಾ, ಕುಮಾರಸ್ವಾಮಿಗೆ ರಾಜೀನಾಮೆ ಕೊಡು ಅಂದರೆ ಕೊಡುತ್ತಾರಾ ಎಂದು ಕಾರವಾಗಿಯೇ ಪ್ರಶ್ನಿಸಿದರು.

136 ಸ್ಥಾನ ಗೆದ್ದು ಸಿಎಂ ಆಗಿರುವ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ,ರಾಜೀನಾಮೆ ಕೊಡಿ ರಾಜೀನಾಮೆ ಕೊಡಿ ಅಂದರೆ ಕೊಡೋದಕ್ಕೆ ಸಾದ್ಯಾನಾ, ಒಂದು ಅತ್ಯಾಚಾರ, ಕೊಲೆ ಪ್ರಕರಣಾನ ಮೂರು ತಿಂಗಳು ಮಾಧ್ಯಮ ತೋರಿಸುತ್ತೆ, ಒಂದು ಎಫ್ ಐ ಆರ್ ನಾ ಎಷ್ಟು ದಿನ ತೋರಿಸುತ್ತಿರಾ, ಯಾರ ಯಾರ ಮೇಲೆ ಎಫ್ ಐ ಆರ್ ಆಗಿದೆ ಎಲ್ಲರೂ ರಾಜೀನಾಮೆ ಕೊಡಿ ಎಂದು ಜಿಟಿಡಿ ಸವಾಲು ಹಾಕಿದರು.

ಶಾಸಕ ಜಿ ಟಿ ದೇವೇಗೌಡ ಭಾಷಣಕ್ಕೆ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಸಚಿವರು ಶಾಸಕರು ಖುಷಿ ಪಟ್ಟರು.

ಭಾಷಣ ಮುಗಿಸಿ ಬಂದ ಜಿ.ಟಿ ದೇವೇಗೌಡರಿಗೆ ಶಾಸಕರಾದ ರಮೇಶ್ ಬಂಡೀಸಿದ್ದೇಗೌಡ, ತನ್ವೀರ್ ಸೇಠ್‌ ಎದ್ದು ನಿಂತು ಗೌರವ ಸಲ್ಲಿಸಿದರು ಸಚಿವ ಹೆಚ್. ಕೆ ಪಾಟೀಲ್, ವೆಂಕಟೇಶ್‌ ಹಸ್ತಲಾಘವ ಕೊಟ್ಟು ಅಭಿನಂದನೆ ಸಲ್ಲಿಸಿದರು.

Advertisement
Tags :
Chamundi HillGTDMysore
Advertisement
Next Article