HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಹಂಪನಾ ಸಾಹಿತ್ಯ ಲೋಕದ ಪೈಲ್ವಾನ್:ಡಿಕೆಶಿವರ್ಣನೆ

05:01 PM Oct 03, 2024 IST | ಅಮೃತ ಮೈಸೂರು
Advertisement

ಮೈಸೂರು: ಕಳೆದ ವರ್ಷ ಸಂಗೀತ ಕ್ಷೇತ್ರದ ದಿಗ್ಗಜ ಹಂಸಲೇಖರನ್ನ ಕರೆಸಿ ದಸರಾ ಉದ್ಘಾಟಿಸಲಾಗಿತ್ತು. ಈ ಬಾರಿ ಸಾಹಿತ್ಯ ಕ್ಷೇತ್ರದ ಪೈಲ್ವಾನ್ ಹಂಪನಾ ಅವರನ್ನು ಕರೆಸಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

Advertisement

ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ವೇಳೆ ಮಾತನಾಡಿದ‌ ಅವರು,ಸಂಸಾರವನ್ನು ಕಾಪಾಡುವವಳು ಹೆಣ್ಣು,ಈ ರಾಜ್ಯವನ್ನು ಕಾಪಾಡುತ್ತಿರುವುದು ಹೆಣ್ಣು ದೇವತೆಗಳು, ಸ್ತ್ರೀ ಶಕ್ತಿಯೇ ನಮ್ಮ ಕರ್ನಾಟಕದ ಶಕ್ತಿ ಎಂದು ಬಣ್ಣಿಸಿದರು.

ಕಳೆದ ವರ್ಷ ದಸರಾ ಉದ್ಘಾಟನೆ ವೇಳೆ ಮಳೆ ಚೆನ್ನಾಗಿ ಬೀಳಲಿ ಎಂದು ಚಾಮುಂಡೇಶ್ವರಿ ಬಳಿ ಬೇಡಿಕೊಂಡಿದ್ದೆವು ಅದರಂತೆ ಉತ್ತಮ ಮಳೆ ಬಂದು ನಾನು ಮತ್ತು ಮುಖ್ಯಮಂತ್ರಿ ಇಬ್ಬರೂ ರಾಜ್ಯದ ನಾಲ್ಕು ಅಣೆಕಟ್ಟುಗಳಿಗೂ ಬಾಗಿನ ಅರ್ಪಿಸುವಂತಾಯಿತು ಎಂದು ಹೇಳಿದರು.

ದುಃಖದಿಂದ ನಮ್ಮನ್ನು ದೂರ ಮಾಡುವವಳು ದುರ್ಗಾ ದೇವಿ. ಚಾಮುಂಡೇಶ್ವರಿಯ ಆಶೀರ್ವಾದದಿಂದ ತಾಯಂದಿರು, ರೈತರು ಮತ್ತು ರಾಜ್ಯದ ಜನ ಸಂತೋಷವಾಗಿದ್ದಾರೆ. ಮುಖ್ಯಮಂತ್ರಿಗಳ ಜೊತೆ ಬಂದು ಕಳೆದ ವರ್ಷ ದೇವಿಗೆ ಗೃಹಲಕ್ಷ್ಮಿ ಹಣದ 2 ಸಾವಿರ ಹಾಗೂ ಒಂದು ವರ್ಷದ ಹಣವನ್ನು ಕಾಣಿಕೆ ಸಲ್ಲಿಸಿದ್ದೆವು ಎಂದು ಡಿಕೆಶಿ ತಿಳಿಸಿದರು.

ನವರಾತ್ರಿ ಎಂದರೆ ಒಂಬತ್ತು ದಿನ. ಈ ಒಂಬತ್ತು ದಿನವೂ ದೇವಿಯ ನಾನಾ ಅವತಾರಗಳನ್ನು ಪೂಜೆ ಮಾಡುತ್ತೇವೆ. ನವ ದುರ್ಗೆಯರ ಶಕ್ತಿ ಮುಂದಿನ 9 ವರ್ಷಗಳ ಕಾಲ ನಮ್ಮ ಸರ್ಕಾರದ ಮೇಲೆ ಇರುತ್ತದೆ ಎಂಬುದು ನನ್ನ ಅಚಲ ನಂಬಿಕೆ ಎಂದು ಡಿಕೆಶಿ ತಿಳಿಸಿದರು.

ಗುರು ಸಮಾನರಾದ ಹಂಪ ನಾಗರಾಜಯ್ಯ ಅವರು ನನಗೆ ಕಳೆದ 55 ವರ್ಷಗಳಿಂದಲೂ ಚಿರಪರಿಚಿತರು. ಅವರ ಮಗ ಹರ್ಷ ಮತ್ತು ನಾನು ಸಹಪಾಠಿಗಳು. ನಾಗರಾಜಯ್ಯ ಅವರಿಗೆ ಶಕ್ತಿಯಾಗಿದ್ದ ಪತ್ನಿ ಕಮಲಾ ಹಂಪನಾ ಅವರ ಅನುಪಸ್ಥಿತಿ ಕಾಡುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಬೇಸರಪಟ್ಟರು.

Advertisement
Tags :
Chamyndi Betta
Advertisement
Next Article