HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಪೌರಕಾರ್ಮಿಕರ ಆರೋಗ್ಯ ಮುಖ್ಯ- ಜಿಟಿಡಿ

ಪೌರ ಕಾರ್ಮಿಕರಿಗೆ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರಕ್ಕೆ ಶಾಸಕ ಜಿ.ಟಿ.ದೇವೇಗೌಡ ಚಾಲನೆ ನೀಡಿದರು
05:21 PM Oct 18, 2024 IST | ಅಮೃತ ಮೈಸೂರು
Advertisement

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿದರು.

Advertisement

ನಗರದ ಹೂಟಗಳ್ಳಿ ನಗರ ಸಭೆ ಆವರಣದಲ್ಲಿ
ಸಮೃದ್ಧಿ ಟ್ರಸ್ಟ್ , ಅನ್ನಪೂರ್ಣ ಕಣ್ಣಿನ ಆಸ್ಪತ್ರೆ, ಎನ್ ಪಿ ಆಸ್ಪತ್ರೆ ಹಾಗೂ ಬಯೋ ಸ್ನೇಹಿ ಅವರ ಸಹಯೋಗದಲ್ಲಿ ಆಯೋಜಿಸಿದ್ದ
ಪೌರ ಕಾರ್ಮಿಕರಿಗೆ ಉಚಿತ ನೇತ್ರ ಹಾಗೂ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಜಿಟಿಡಿ ಮಾತನಾಡಿದರು.

ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಡುತ್ತಿರುವುದರಿಂದ ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿದೆ, ಕೆಲಸದ ಒತ್ತಡ ದಲ್ಲಿ ಮಾಡುವ ಕೆಲವೊಂದು ನಿರ್ಲಕ್ಷ್ಯತನದಿಂದ ನಮ್ಮ ಆರೋಗ್ಯ ಹಾಳಾಗುತ್ತಿದೆ. ಪೌರಕಾರ್ಮಿಕರು ಆರೋಗ್ಯ ತಪಾ ಸಣೆ ಶಿಬಿರ ಗಳಿಗೆ ಸೀಮಿತವಾಗದೇ ನಿತ್ಯ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಎಂದು ಹೇಳಿದರು.

ಪೌರಕಾರ್ಮಿಕರು ಆರೋಗ್ಯವಾಗಿದ್ದರೆ ಇಡೀ ನಗರ ಆರೋಗ್ಯ ವಾಗಿರುತ್ತದೆ. ಪೌರಕಾರ್ಮಿಕರು ಆರೋಗ್ಯವಂತರಾಗಿದ್ದರೆ ನಗರದ ಸ್ವಚ್ಛತೆಯನ್ನು ಕಾಪಾಡಿ ಎಲ್ಲರ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ಆದುದರಿಂದ ಅವರು ಇಂತಹ ಆರೋಗ್ಯ ಶಿಬಿರಗಳನ್ನು ಸದುಪಯೋಗ ಪಡೆದು ಕೊಳ್ಳಬೇಕು ಎಂದು ಜಿ.ಟಿ.ದೇವೇಗೌಡ ತಿಳಿಸಿದರು.

ನಗರಸಭೆ ಆಯುಕ್ತ ಚಂದ್ರಶೇಖರ್. B.N, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಗಿರಿಜಾ, ಸಮೃದ್ಧಿ ವಾರ್ತೆ ಪತ್ರಿಕೆಯ ಸಂಪಾದಕಿ ಸಹನಗೌಡ, ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷ ರಕ್ತದಾನಿ ಮಂಜು,ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ಎಂಡಿ ಅಶ್ವತ್ ಕುಮಾರ್,ಎನ್‌.ಪಿ ಆಸ್ಪತ್ರೆಯ ವಿರಪ್ಪ, ಹೆಲ್ತ್ ಇನ್ಸ್ಪೆಕ್ಟರ್ ಗಳಾದ ಶಂಕರ್ ಲಿಂಗೇಗೌಡರು, ಶಿವಪ್ರಸಾದ್, ನೇತ್ರಾವತಿ, ಪುಷ್ಪಲತಾ ಹಾಗೂ ಬಯೋಸ್ನೇಹಿ ಮನು
ಮತ್ತಿತರರು ಹಾಜರಿದ್ದರು.

Advertisement
Tags :
Civil.ServentsG.T.Deve GowdaMysore
Advertisement
Next Article