ಪೋರ್‌ಬಂದರ್‌ನಲ್ಲಿ ಹೆಲಿಕಾಪ್ಟರ್ ಪತನ
ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
07:13 PM Jan 05, 2025 IST
|
ಅಮೃತ ಮೈಸೂರು
Advertisement
ಪೋರ್‌ಬಂದರ್: ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಹೆಲಿಕಾಪ್ಟರ್ ಪತನಗೊಂಡಿದೆ.
ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಮೂವರು ದಾರುಣವಾಗಿ ಮೃತಪಟ್ಟಿದ್ದಾರೆ.
Advertisement
ಪೈಲಟ್‌ಗಳಿಗೆ ತರಬೇತಿ ನೀಡುತ್ತಿದ್ದಾಗ ಈ ಘಟನೆ ನಡೆದಿದ್ದು ಮೂವರು ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದರು.
ಮೂವರು ಸಿಬ್ಬಂದಿಯನ್ನು ಹೆಲಿಕಾಪ್ಟರ್‌ನಿಂದ ಹೊರಕ್ಕೆ ತಂದು ಪೋರಬಂದರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ ಎಂದು ಕಮಲಾ ಬಾಗ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜೇಶ್ ಕಾನ್ಮಿಯಾ ತಿಳಿಸಿದ್ದಾರೆ.
Advertisement
Next Article