HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಸಹಿಸಲ್ಲ - ಸಿಎಂ ಸಿದ್ದು

05:29 PM Dec 13, 2024 IST | ಅಮೃತ ಮೈಸೂರು
Advertisement

ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಸಹಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು.

Advertisement

ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಕೇಳುವುದಕ್ಕೆ, ಚಳವಳಿ ಮಾಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆಯಾಗಬೇಕು,ಕಾನೂನನ್ನು ಯಾರೂ ಕೈಗೆ ತೆಗೆದುಕೊಳ್ಳಬಾರದು ಎಂದು ಕೋರಿದರು.

ಮುಖ್ಯಮಂತ್ರಿಗಳು ಹೃದಯಹೀನರು ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದು, ಈ ಬಗ್ಗೆ ಜನರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

ಸ್ವಾಮೀಜಿಯಾಗಲಿ, ಯಾರಾದರೂ ಆಗಿರಲಿ.‌ ಎಲ್ಲರಿಗೂ ನನಗೂ ಸೇರಿ ಎಲ್ಲರಿಗೂ ಕಾನೂನು ಒಂದೇ. ಸಂವಿಧಾನದ 14 ನೇ ವಿಧಿಯ ಪ್ರಕಾರ ಕಾನೂನಿನ ಮುಂದೆ ಎಲ್ಲರೂ ಸಮಾನರು ಕಾನೂನಿನ ಸಮಾನ ರಕ್ಷಣೆಯನ್ನು ಖಾತ್ರಿಪಡಿಸುತ್ತದೆ ಎಂದು ಹೇಳಿದರು.

ಪ್ರವರ್ಗ 2ಎ ಅಡಿಯಲ್ಲಿರುವ ಸಮುದಾಯಗಳು ಪಂಚಮಸಾಲಿ ಸಮುದಾಯವನ್ನು 2 ಎ ಗೆ ಸೇರಿಸಲು ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅವರ ಅಭಿಪ್ರಾಯ ಹೇಳಲು ಅವರಿಗೆ ಸ್ವಾತಂತ್ರ್ಯವಿದೆ. ಸ್ವಾಮೀಜಿಗಳಿಗೂ ಅವರ ಅಭಿಪ್ರಾಯ ತಿಳಿಸಲು ಸ್ವಾತಂತ್ರ್ಯವಿದೆ. ಅಂತಿಮವಾಗಿ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಪಂಚಮಸಾಲಿ ಹೋರಾಟವನ್ನು ಟ್ರ್ಯಾಕ್ಟರ್ ತರುವ ಮೂಲಕ ಮಾಡುತ್ತೇವೆ ಎಂದು ಮೊದಲೇ ತಿಳಿಸಿದ್ದರು. ನ್ಯಾಯಾಲಯ ಹೋರಾಟವನ್ನು ಶಾಂತಿಯುತವಾಗಿ , ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಸೂಚನೆ ನೀಡಿತ್ತು. ಆದರೆ ಹೋರಾಟಗಾರರು ಕಾನೂನನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದರು. ಸ್ಥಳಕ್ಕೆ ಮಹದೇವಪ್ಪ ಸೇರಿದಂತೆ ಮೂರು ಸಚಿವರನ್ನು ಕಳುಹಿಸಲಾಗಿತ್ತು ಎಂದು ಸಿದ್ದರಾಮಯ್ಯ ತಿಳಿಸಿದರು.

Advertisement
Tags :
CM SiddaramaiahVijayapur
Advertisement
Next Article