HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ-ಸಿಎಂ ಭರವಸೆ

07:28 PM Oct 29, 2024 IST | ಅಮೃತ ಮೈಸೂರು
Advertisement

ಬೆಂಗಳೂರು: ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Advertisement

ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ತಮ್ಮನ್ನು ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಪ್ರತಿಷ್ಠಿತರು, ಒಳಮೀಸಲಾತಿ ಹೋರಾಟದ ನಾಯಕರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಸಿಎಂ ಮಾತನಾಡಿದರು.

ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ,ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ ಶೇ 90 ರಷ್ಟು ಸಮುದಾಯಗಳಿಗೆ ಸಮಾಧಾನ‌ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ, ಇದನ್ನು ನಮ್ಮ‌ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.

ಕ್ಯಾಬಿನೆಟ್ ನಲ್ಲಿ ಸಚಿವ ಮಹದೇವಪ್ಪ ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ,ಮುನಿಯಪ್ಪ ಅವರು ಎಲ್ಲರೂ ಮಾತನಾಡಿ ದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು, ಆದರೆ ಡಾಟಾ ಅಗತ್ಯವಿದೆ ಎಂಬ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ.

ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶ ಸಮೇತ ವರದಿ ನೀಡುತ್ತದೆ, ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಹೇಳಿದರು.

ಸಮುದಾಯಗಳನ್ನು ಪರಸ್ಪರ ಸುಳ್ಳುಗಳ ಮೂಲಕ ಎತ್ತಿಕಟ್ಟುವ ಬಿಜೆಪಿ ಕೇಂದ್ರದಲ್ಲಿ ಏಕೆ ಎಸ್ ಸಿ ಪಿ,ಟಿ ಎಸ್ ಪಿ ಕಾಯ್ದೆ ಜಾರಿ ಮಾಡಿಲ್ಲ ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯಗಳಲ್ಲೂ ಮಾಡಲಿಲ್ಲ ಎಂದು ಟೀಕಿಸಿದರು.

ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಬಿಜೆಪಿಯ ಯಾವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ. ಇದು ನನ್ನ ಕಮಿಟ್ ಮೆಂಟ್, ರಾಜಕಾರಣಕ್ಕಾಗಿ ಇದೆಲ್ಲಾ ಮಾಡಿದ್ದಲ್ಲ. ಇದರ ಮುಂದುವರೆದ ಭಾಗವಾಗಿಯೇ ಒಳಮೀಸಲಾತಿ ಜಾರಿಗೆ ಮುಂದಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಹೊಸ ಆಯೋಗದ ವರದಿ ನಿಗದಿತ ಸಮಯದೊಳಗೆ ಬರುವ ನಿರೀಕ್ಷೆ ಇದೆ. ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಸಚಿವ ಎಚ್.ಆಂಜನೇಯ,
ಆರ್.ಬಿ.ತಿಮ್ಮಾಪುರ್,
ಎಲ್.ಹನುಮಂತಯ್ಯ ಅವರು ಮಾತನಾಡಿ,
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದರು.

Advertisement
Tags :
CM SiddaramaiahInternal Reservation
Advertisement
Next Article