ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ದರಾಮಯ್ಯಗೆ ಅಧಿಕೃತ ಆಹ್ವಾನ
ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ ನೀಡಲಾಯಿತು
02:58 PM Sep 26, 2024 IST
|
ಅಮೃತ ಮೈಸೂರು
Advertisement
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವರಿಂದ ಅಧಿಕೃತ ಆಹ್ವಾನ ನೀಡಲಾಯಿತು.
Advertisement
ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮುಖ್ಯ ಮಂತ್ರಿಗಳಿಗೆ ಆಮಂತ್ರಣ ಕೋರಲಾಯಿತು.
ಈ ವೇಳೆ ಕೆ.ಆರ್. ನಗರ ಶಾಸಕ ಡಿ.ರವಿಶಂಕರ್, ಎಚ್.ಡಿ ಕೋಟೆ ಶಾಸಕ ಅನಿಲ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಡಾ ಯತೀಂದ್ರ, ಸಿ.ಎನ್.ಮಂಜೇಗೌಡ, ಡಾ ತಿಮ್ಮಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಹಾಗೂ ಸ್ವಾಗತ ಸಮಿತಿಯ ಅಧಿಕಾರಿಗಳು ಮತ್ತಿತರರೊಂದಿಗೆ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಕ್ಕೆ ತೆರಳಿ ದಸರಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಂತೆ ಸಚಿವ ಮಹದೇವಪ್ಪ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿದರು.
Advertisement
Next Article