HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
04:15 PM Sep 25, 2024 IST | ಅಮೃತ ಮೈಸೂರು
Advertisement

ಬೆಂಗಳೂರು: ಹೈಕೋರ್ಟ್ ಮತ್ತು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಜೆಡಿಎಸ್ ಕಾರ್ಯಕರ್ತರು ಪಕ್ಷದ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೆ, ಜನ ಪ್ರತಿನಿಧಿಗಳ ನ್ಯಾಯಾಲಯ ಸಿಎಂ ವಿರುದ್ಧ ಎಫ್ ಐ ಆರ್ ದಾಖಲಿಸಿ, ಮೂರು ತಿಂಗಳ ಒಳಗಾಗಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ.ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.

ಊರಿಗೆಲ್ಲ ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಒಂದು‌ ವೇಳೆ ರಾಜೀನಾಮೆ ಕೊಡದಿದ್ದರೆ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

Advertisement
Tags :
BanagaluruJDSProtest
Advertisement
Next Article