ಕ ರ ವೇ ಸಿಂಹ ಪಡೆ ವತಿಯಿಂದ ಮಾದಕ ವಸ್ತು ಬಗ್ಗೆ ವಿದ್ಯಾರ್ಥಿಗಳಿಗೆ ಜಾಗೃತಿ
ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಪಡೆ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸೇವನೆ ಹಾಗೂ ಸೈಬರ್ ಕ್ರೈಂ ಬಗ್ಗೆ ಅರಿವು ಮೂಡಿಸಲಾಯಿತು.
ರಕ್ಷಣಾ ವೇದಿಕೆ ಸಿಂಹ ಪಡೆ
ಸಂಘಟನೆಯ ರಾಜ್ಯಾಧ್ಯಕ್ಷ ಡಾ.ನರಸಿಂಹ ಪ್ರಸಾದ್ ವಿ ಅವರ ನೇತೃತ್ವದಲ್ಲಿ ಅಪರಾಧ ತಡೆ ಮಾಸದ ಪ್ರಯುಕ್ತ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸೇವನೆ ಹಾಗೂ ಸೈಬರ್ ಕ್ರೈಂ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮವನ್ನು ಉತ್ತರಹಳ್ಳಿಯ ಬಿ ಬಿ ಎಂ ಪಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಕ್ಷಣಾ ವೇದಿಕೆ ಸಿಂಹಪಡೆ ಪ್ರತಿ ವರ್ಷವೂ ಈ ರೀತಿಯ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಮಾದರಿಯಾಗಿದೆ.
ಕಾರ್ಯಕ್ರಮವನ್ನು ಸುಬ್ರಹ್ಮಣ್ಯಪುರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಸನ್ನ ಅವರು ನಡೆಸಿಕೊಟ್ಟರು.
ಕರವೇ ಸಿಂಹಪಡೆಯ ರಾಜ್ಯ ಸಮಿತಿಯ ಸದಸ್ಯ ವೆಂಕಟೇಶ್ ಕುಲಕರ್ಣಿ, ಬೆಂಗಳೂರು ನಗರ ಸಮಿತಿಯ ಅಧ್ಯಕ್ಷ ಬಸವರಾಜು, ಗಿರೀಶ್ ಗೌಡ, ವೆಂಕಟೇಶ್ ಹಾಗೂ ರಾಮು ಮತ್ತಿತರರು ಉಪಸ್ಥಿತರಿದ್ದರು.