HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಎಸ್‌.ಎಂ ಕೃಷ್ಣ ಪಂಚಭೂತಗಳಲ್ಲಿ ಲೀನ

ದೂರದೃಷ್ಟಿಯ ಕನಸುಗಾರ, ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
06:36 PM Dec 11, 2024 IST | ಅಮೃತ ಮೈಸೂರು
Advertisement

ಮಂಡ್ಯ: ದೂರದೃಷ್ಟಿಯ ಕನಸುಗಾರ, ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

Advertisement

ಡಿ 11 ರಂದು ಸಂಜೆ ಕೃಷ್ಣ ಅವರ ಹುಟ್ಟೂರು ಮಂಡ್ಯ ಜಿಲ್ಲೆ, ಮದ್ದೂರು ತಾಲೂಕು, ಸೋಮನಹಳ್ಳಿಯ ಹೊರವಲಯದ ಕೆಫೆ ಕಾಫಿ ಡೇ ಆವರಣದಲ್ಲಿ ಒಕ್ಕಲಿಗ ಸಂಪ್ರದಾಯಂತೆ ಹಾಗೂ ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

ಇದಕ್ಕೂ ಮೊದಲು ಪೊಲೀಸ್ ತಂಡ ರಾಷ್ಟ್ರಗೀತೆ ನಮನ ಸಲ್ಲಿಸಿತು, ನಂತರ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೃಷ್ಣ ಅವರ ಪತ್ನಿ ಪ್ರೇಮಾ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು.

ನಂತರ ಭಾನುಪ್ರಕಾಶ್ ಶರ್ಮಾ ಹಾಗೂ ಇತರ 15 ವೈದಿಕರ ತಂಡ ಮಂತ್ರ ಘೋಷಗಳೊಂದಿಗೆ ಅಂತಿಮ ವಿಧಿವಿಧಾನ ನೆರವೇರಿಸಿದರು,ಆನಂತರ ಎಸ್‌.ಎಂ ಕೃಷ್ಣ ಅವರ ಮೊಮ್ಮಗ ಅಮರ್ಥ್ಯ ಹೆಗ್ಡೆ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಚಿತೆಗೆ ಅರಣ್ಯ ಇಲಾಖೆಯಿಂದ 1 ಸಾವಿರ ಕೆಜಿ ಶ್ರೀಗಂಧದ ಕಟ್ಟಿಗೆ ಪೂರೈಸಲಾಗಿತ್ತು. ಬಾಳೆ ಎಲೆಯಲ್ಲಿ ಪಾರ್ಥಿವ ಶರೀರ ಮುಚ್ಚಿ, 50 ಕೆಜಿ ತುಪ್ಪ ಬಳಸಿ ಚಿತೆಗೆ ಅಗ್ನಿಸ್ಪರ್ಶ ಮಾಡಲಾಯಿತು.

ಅಂತಿಮ ವಿಧಿ ವಿಧಾನದ ಇಡೀ ಉಸ್ತುವಾರಿಯನ್ನು ಉಪಮುಖ್ಯ ಡಿ.ಕೆ. ಶಿವಕುಮಾರ್ ವಹಿಸಿಕೊಂಡಿದ್ದರು.

ಸಿಎಂ ಸಿದ್ದರಾಮಯ್ಯ,ಡಿಸಿಎಂ,ಡಿ.ಕೆ.
ಶಿವಕುಮಾರ್,ಗೃಹಸಚಿವ ಜಿ.ಪರಮೇಶ್ವರ್,ಸ್ಪೀಕರ್ ಯು.ಟಿ.ಖಾದರ್, ವಿಪಕ್ಷ ನಾಯಕ ಆರ್.ಅಶೋಕ್, ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಹೆಚ್.ಡಿ ಕುಮಾರಸ್ವಾಮಿ, ಮಾಜಿ ಮುಖ್ಯ ಮಂತ್ರಿಗಳಾದ ಬಿ.ಎಸ್‌ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕರು, ನಿರ್ಮಲಾನಂದನಾಥ ಸ್ವಾಮೀಜಿ ಸೇರಿ ಪ್ರಮುಖ ಮಠಗಳ ಪೀಠಾಧಿಪತಿಗಳು ಹಾಜರಿದ್ದು, ಅಂತಿಮ ನಮನ ಸಲ್ಲಿಸಿದರು.

ಮಂಡ್ಯ, ರಾಮನಗರ ಜಿಲ್ಲೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಂದ ಬಹಳಷ್ಟು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.

ಪಾರ್ಥಿವ ಶರೀರದ ಜೊತೆಗೆ ವಾಹನದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸಾಗಿಬಂದರು ಸೋಮನಹಳ್ಳಿಗೆ ಸಾಗುವ ಮಾರ್ಗದಲ್ಲಿ ಕೆಂಗೇರಿ, ಬಿಡದಿ, ರಾಮನಗರ, ಚನ್ನಪಟ್ಟಣ ಸೇರಿದಂತೆ ಮಧ್ಯದಲ್ಲಿ ಕೆಲ ಸಮಯ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಅವಕಾಶ ನೀಡಲಾಗಿತ್ತು.

ದಾರಿಯುದ್ದಕ್ಕೂ ಸ್ಥಳೀಯ ಶಾಸಕರು, ಸಾರ್ವಜನಿಕರು ಚಿರಶಾಂತಿ ವಾಹನಕ್ಕೆ ಹೂಗಳನ್ನು ಹಾಕಿ ಅಂತಿಮ ನಮನ ಸಲ್ಲಿಸಿದರು.

Advertisement
Tags :
MandyaS.M.Krishna's
Advertisement
Next Article