HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಲಷ್ಕರ್ ಪೊಲೀಸರ ಕಾರ್ಯಾಚರಣೆ:ಕಳ್ಳಿ ಅರೆಸ್ಟ್

08:15 PM Dec 06, 2024 IST | ಅಮೃತ ಮೈಸೂರು
Advertisement

ಮೈಸೂರು: ಮೈಸೂರಿನಲ್ಲಿ ಲಷ್ಕರ್ ಠಾಣೆ ಪೊಲೀಸರು ಸರಗಳ್ಳಿಯೊಬ್ಬಳನ್ನು ಬಂಧಿಸಿದ್ದಾರೆ.

Advertisement

ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಹಿಳೆಯರ ಚಿನ್ನದ ಸರ ಕಳುವು ಮಾಡುತ್ತಿದ್ದ ಸರಗಳ್ಳಿಯನ್ನ ಬಂಧಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೆ.ಆರ್.ನಗರ ಮೂಲದ ಲತಾ ಬಂಧಿತ ಸರಗಳ್ಳಿ.ಆಕೆಯಿಂದ 3.90 ಲಕ್ಷ ಮೌಲ್ಯದ ಒಟ್ಟು 54 ಗ್ರಾಂ ತೂಕದ ಎರಡು ಚಿನ್ನದ ಸರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇತ್ತೀಚೆಗೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸರಗಳ್ಳತನ ಪ್ರಕರಣ ನಡೆದಿತ್ತು.ಆ ಸಂಬಂಧ ಲಷ್ಕರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ಕಳ್ಳರ ಬಂಧನಕ್ಕೆ ತಂಡ ರಚಿಸಿದ್ದರು.

ಗ್ರಾಮಾಂತರ ಬಸ್ ನಿಲ್ದಾಣದಲ್ಲೇ ಆರೋಪಿ ಲತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಆಕೆಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಸರಗಳುವು ಮಾಡಿರುವುದಾಗಿ ಬಾಯಿ ಬಿಟ್ಟಿದ್ದಾಳೆ.

ಅಪರಾಧ ಮತ್ತು ಸಂಚಾರ ಡಿಸಿಪಿ ಜಾಹ್ನವಿ ಅವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಅವರ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆ ಇನ್ಸ್ಪೆಕ್ಟರ್ ಪ್ರಸಾದ್ ಕೆ.ಆರ್. ಪಿಎಸ್ಸೈ ಗಳಾದ ಕು.ರಾಧಾ,ಅನಿಲ್ ಕುಮಾರ್ ನೇತೃತ್ವದಲ್ಲಿ ಎಎಸ್ಸೈ ಲೋಕೇಶ್ ಸಿಬ್ಬಂದಿಗಳಾದ ಸುರೇಶ್,ರವಿಕುಮಾರ್,
ಗಿರೀಶ್,ಮಂಜುನಾಥ್,ಚೌಡಪ್ಪ ಪಾಸೀಗರ್,ಅಬ್ದುಲ್ ರೆಹಮಾನ್,ಚಿಕ್ಕಣ್ಣ ಸ್ವಾಮಿ,ಅಶ್ವಿನಿ ಹಳವಾರ ಅವರುಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement
Tags :
Mysore
Advertisement
Next Article