HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಅತ್ಯಾಧುನಿಕ ಆಂಬುಲೆನ್ಸ್ ಗಳು ಅಪಘಾತಕ್ಕೊಳಗಾದವರಿಗೆ ಒಳಿತು :ಸಿಎಂ

ವಿಧಾನಸೌಧದ ಬಳಿ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
04:33 PM Sep 23, 2024 IST | ಅಮೃತ ಮೈಸೂರು
Advertisement

ಬೆಂಗಳೂರು: ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಸಹಕಾರಿಯಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ವಿಧಾನಸೌಧದ ಬಳಿ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಲೋಕಾರ್ಪಣೆಗೊಳಿಸಿ ನಂತರ ಮಾತನಾಡಿ‌ದ ಸಿಎಂ,ಆಪತ್ಕಾಲ ಯಾನ ಸೇವೆ ಬಹಳ ಉಪಕಾರಿ ಎಂದು ಬಣ್ಣಿಸಿದರು.

26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್ ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದೆ, ಇವುಗಳನ್ನು ರಾಜ್ಯದ ಜಿಲ್ಲೆಗಳಿಗೆ ಕಳಿಸಲಾಗುವುದು ಎಂದು ತಿಳಿಸಿದರು.

ರಾಜ್ಯಪಾಲರು ಅರ್ಕಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿಯವರು ಹಿಂದೆ ನಾಲ್ಕು ವರ್ಷ ಅವಧಿಯಲ್ಲಿದ್ದಾಗ ವಿಷಯವನ್ನು ಏಕೆ ವಿಧಾನಸಭೆಯಲ್ಲಿ ಪ್ರಸ್ತಾಪಿಸಲಿಲ್ಲ ಎಂದು ಪ್ರಶ್ನಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಿ.ಟಿ.ರವಿಯವರು ರಾಜ್ಯಪಾಲರಿಗೆ ಈಗ ಪತ್ರ ಬರೆದಿದ್ದಾರಲ್ಲಾ, ಹಿಂದೆ ಅವರು ಸಚಿವರಾಗಿದ್ದಾಗ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಕಾರವಾಗಿ ಪ್ರಶ್ನಿಸಿದರು.

ರಾಜ್ಯಪಾಲರ ಪತ್ರವನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕನ್ನಡದಲ್ಲಿ ಸಹಿ ಮಾಡಿಲ್ಲವೆಂಬ ಸಣ್ಣ ವಿಷಯದ ಬಗ್ಗೆಯೂ ರಾಜ್ಯಪಾಲರು ಸರ್ಕಾರಕ್ಕೆ ಪತ್ರ ಬರೆದು ವರದಿ ಕೇಳುತ್ತಾರೆ ಕನ್ನಡದಲ್ಲಿರುವ ಪತ್ರಗಳಿಗೆ ಕನ್ನಡದಲ್ಲಿ ಹಾಗೂ ಆಂಗ್ಲದಲ್ಲಿರುವ ಪತ್ರಗಳಿಗೆ ಆಂಗ್ಲದಲ್ಲಿ ಸಹಿ ಮಾಡುವುದು ತಪ್ಪೇನಲ್ಲ, ಇಂತಹ ಕ್ಷುಲ್ಲಕ ವಿಚಾರಗಳ ಬಗ್ಗೆ ರಾಜ್ಯಪಾಲರು ಉತ್ತರ ಕೇಳುವುದು ಸರಿಯಲ್ಲ ಎಂದು ಮುಖ್ಯ ಮಂತ್ರಿಗಳು ಬೇಸರ ವ್ಯಕ್ತಪಡಿಸಿದರು.

Advertisement
Tags :
AmbulenceBangaluruVidhana Soudha
Advertisement
Next Article