HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಅ. 3ರಂದು ದಸರಾ ಮಹೋತ್ಸವಕ್ಕೆ ಚಾಲನೆ- ಡಾ.ಮಹದೇವಪ್ಪ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ಮಾತನಾಡಿದರು
05:28 PM Sep 30, 2024 IST | ಅಮೃತ ಮೈಸೂರು
Advertisement

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಅ.3 ರಂದು ಉದ್ಘಾಟನೆಯಾಗಲಿದ್ದು, ಸಿದ್ದತಾ ಕಾರ್ಯಗಳು ಮುಗಿಯುತ್ತಾ ಬಂದಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು
ಅಕ್ಟೋಬರ್ 3ರಂದು 9.15ರಿಂದ 9.40 ರ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ ಅಂದೇ ಎಲ್ಲಾ ಕಾರ್ಯಕ್ರಮಗಳು ಕೂಡಾ ಉದ್ಘಾಟನೆಗೊಳ್ಳಲಿವೆ ಎಂದು ತಿಳಿಸಿದರು.

ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನ ಸಿಎಂ ನೀಡಲಿದ್ದಾರೆ. 11ವೇದಿಕೆಗಳಲ್ಲಿ 508 ಕಲಾ ತಂಡಗಳು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ಮಾಡಲಿದ್ದಾರೆ. ಅ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದರು.

ಯುವ ದಸರಾಕ್ಕೆ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ, ಮಹರಾಜ ಕಾಲೇಜು ಮೈದಾನದಲ್ಲಿ ಟ್ರಾಫಿಕ್ ಸಮಸ್ಯೆ,ಕಾನೂನು ಸುವ್ಯವಸ್ಥೆಗೆ ತೊಂದರೆಯಾಗಬಹುದು ಎಂಬ ಕಾರಣಕ್ಕಾಗಿ ನಗರದ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಯುವ ದಸರಾಕ್ಕೆ ಆಗಮಿಸುವ ಜನರಿಗೆ ಬಸ್ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯ ಮಾಡಲಾಗಿದೆ, ಕಾರ್ಯಕ್ರಮ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನ ನೇಮಕ ಮಾಡುತ್ತೇವೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ,
ಸೆ. 26ರಿಂದ ದಸರಾ ಗೋಲ್ಡ್ ಪಾಸ್ ಮಾರಾಟ ಮಾಡಲಾಗುತ್ತಿದೆ, ಈಗಲೂ ಆನ್ ಲೈನ್ ನಲ್ಲಿ ಗೋಲ್ಡ್ ಪಾಸ್ ಮಾರಾಟಕ್ಕೆ ಇದೆ ಎಂದು ‌ಹೇಳಿದರು.

ಜಿಲ್ಲಾ ಪಂಚಾಯತ್ ‌ಸಿಇಒ ಗಾಯಿತ್ರಿ ಉಪಸ್ಥಿತರಿದ್ದರು.

Advertisement
Tags :
MinisterMysore
Advertisement
Next Article