For the best experience, open
https://m.navayuganews.com
on your mobile browser.
Advertisement

ಬೆಂಗಳೂರು, ಆ.7: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ 6ನೇ ಪ್ರಾದೇಶಿಕ ಕೇಂದ್ರ ಕಚೇರಿಯನ್ನು ತೆರೆದಿದೆ.

Advertisement

ಬೆಂಗಳೂರಿನ ಸುಂಕದಕಟ್ಟೆಯಲ್ಲಿ ಶ್ರೀ ಲಕ್ಷ್ಮಿ ಕಾಲೇಜ್ ಆಫ್ ಸೈನ್ಸ್ ಅಂಡ್ ಮ್ಯಾನೇಜ್‌ಮೆಂಟ್ ಆವರಣ, ಶ್ರೀಗಂಧಕಾವಲ್,ಮಾಗಡಿ ಮುಖ್ಯ ರಸ್ತೆ, ಸುಂಕದಕಟ್ಟೆ, ಬೆಂಗಳೂರು-560091.ಈ ಆವರಣದಲ್ಲಿ ಪ್ರಾರಂಭಿಸಲಾಗಿದೆ.

22.7.2024 ರಿಂದಲೇ ವಿ.ವಿ ಯ ವಿವಿಧ ಕೋರ್ಸ್‌ ಗಳಿಗೆ (ಜುಲೈ ಆವೃತ್ತಿ) ಪ್ರವೇಶಾತಿ ಕಾರ್ಯ ಆರಂಭವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ವಿದ್ಯಾರ್ಥಿಗಳು ಅದರನ್ವಯ ವಿವಿಧ ಶಿಕ್ಷಣ ಕ್ರಮಗಳಿಗೆ ಮೇಲೆ ತಿಳಿಸಲಾಗಿರುವ ವಿ.ವಿಯ ನೂತನ ಪ್ರಾದೇಶಿಕ ಕೇಂದ್ರ ಕಚೇರಿಗೆ ಭೇಟಿ ನೀಡಿ ಅರ್ಜಿಯನ್ನು ಪರಿಶೀಲಿಸಿಕೊಂಡು ಆನ್‌ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದೆಂದು ಪ್ರಾದೇಶಿಕ ನಿರ್ದೇಶಕರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-06,
ನಂ.4 ಮತ್ತು 5. 1ನೇ ಮಹಡಿ, ಶ್ರೀ ಲಕ್ಷ್ಮಿ ಕಾಲೇಜ್ ಆಫ್ ಸೈನ್ಸ್ & ಮ್ಯಾನೇಜ್‌ಮೆಂಟ್ ಆವರಣ. ಶ್ರೀಗಂಧಕಾವಲ್,ಮಾಗಡಿ ಮುಖ್ಯ ರಸ್ತೆ, ಸುಂಕದಕಟ್ಟೆ, ಬೆಂಗಳೂರು-560091.ಮತ್ತು ದೂರವಾಣಿ : 8453458238, 9844556968. Email:ksoubengalururc06@gmail.com , 8884772421ರಲ್ಲಿ ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ.

Advertisement
Tags :
Advertisement