For the best experience, open
https://m.navayuganews.com
on your mobile browser.
Advertisement

ರಾಮನಗರ,ಆ.5: ನಮ್ಮ ಹೋರಾಟದ ಬಿಸಿ ಕಾಂಗ್ರೆಸ್ಸಿಗೆ ಮತ್ತು ಅವರ ಸರ್ಕಾರಕ್ಕೆ ಮುಟ್ಟಿದೆ‌ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.

Advertisement

ನಮ್ಮ ಹೋರಾಟದ ಪರಿಣಾಮದಿಂದ ಕಾಂಗ್ರೆಸ್ ಸರ್ಕಾರ ಒಂಟಿಗಾಲಿನಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಟೀಕಿಸಿದರು.

ರಾಮನಗರದ ಕೆಂಗಲ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ,ಕಾಂಗ್ರೆಸ್ ಹೈಕಮಾಂಡ್ ಕಳುಹಿಸಿದ ವೇಣುಗೋಪಾಲ್, ಸುರ್ಜೇವಾಲಾ ಅವರು ಶಾಸಕರಿಗೆ ಪಾಠ ಹೇಳಿಕೊಟ್ಟಿದ್ದಾರೆ, ಮುಖ್ಯಮಂತ್ರಿಗಳನ್ನು ರಕ್ಷಿಸಲು ಸೂಚಿಸಿದ್ದಾರೆ,ಹಗರಣದಲ್ಲಿ ಮುಳುಗಿದ ಸರ್ಕಾರದ ಮತ್ತು ಮುಖ್ಯಮಂತ್ರಿಗಳನ್ನು ಬಲವಾಗಿ ಸಮರ್ಥನೆ ಮಾಡಲು ದೆಹಲಿ ಗಾಂಧಿ ಕುಟುಂಬದ ಸಂದೇಶವನ್ನು ನೀಡಿ ಹೋಗಿದ್ದಾರೆ ಎಂದು ವ್ಯಂಗ್ಯ ವಾಡಿದರು.

ಕೆಂಗಲ್ ಶ್ರೀ ಹನುಮಂತ ಸ್ವಾಮಿಗೆ ಪೂಜೆ ಸಲ್ಲಿಸಿ ನಮ್ಮ 3ನೇ ದಿನದ ಪಾದಯಾತ್ರೆ ಆರಂಭಿಸಿದ್ದೇವೆ, ನಮ್ಮೆಲ್ಲ ಶಾಸಕ ಮಿತ್ರರು, ಬಿಜೆಪಿ- ಜೆಡಿಎಸ್ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ದಿನೇದಿನೇ ನಮ್ಮ ಪಾದಯಾತ್ರೆಯಲ್ಲಿ ಹೆಚ್ಚು ವಿಶ್ವಾಸ, ಉತ್ಸಾಹದಿಂದ ಹೆಜ್ಜೆಗೆ ಹೆಜ್ಜೆ ಇಡುತ್ತಿದ್ದಾರೆ. ಇದರಿಂದ ಆಡಳಿತ ಪಕ್ಷಕ್ಕೆ ನಿದ್ರೆ ಬರುತ್ತಿಲ್ಲ ಎಂದು ಟೀಕಿಸಿದರು.

ಇಂತಹ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸಲು ಈ ಹೋರಾಟ ಮಾಡುತ್ತಿದ್ದೇವೆ ಎಂದು ವಿಜಯೇಂದ್ರ ತಿಳಿಸಿದರು.

Advertisement
Tags :
Advertisement