For the best experience, open
https://m.navayuganews.com
on your mobile browser.
Advertisement

ಮೈಸೂರು: ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಸ್ತು ಪ್ರದರ್ಶನವನ್ನು ಪ್ಲಾಸ್ಟಿಕ್ ಮುಕ್ತ ಮಾಡಲಾಗುವುದು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಹೇಳಿದರು.

Advertisement

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ವಸ್ತು ಪ್ರದರ್ಶನವನ್ನು ವೀಕ್ಷಿಸಲು ಹಾಗೂ ಉತ್ಪನ್ನಗಳನ್ನು ಕೊಂಡುಕೊಳ್ಳಲು ಬರುವ ಸಾರ್ವಜನಿಕರು ಪ್ಲಾಸ್ಟಿಕ್ ಬ್ಯಾಗ್ ಗಳ ಬದಲಾಗಿ ಬಟ್ಟೆ ಚೀಲಗಳನ್ನು ತಂದು ಪ್ಲಾಸ್ಟಿಕ್ ಮುಕ್ತ ವಸ್ತು ಪ್ರದರ್ಶನಕ್ಕೆ ಸಹಕಾರ ನೀಡಬೇಕು ಎಂದು ಕೋರಿದರು.

ಪ್ರಾಧಿಕಾರದ ಮುಂಭಾಗದಲ್ಲಿಯೇ ಸಾರ್ವಜನಿಕರಿಗೆ ಉಚಿತ ಬಟ್ಟೆ ಚೀಲಗಳನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.

ವಸ್ತು ಪ್ರದರ್ಶನದಲ್ಲಿ ಸ್ಥಾಪಿಸಲಾಗುವ ಸ್ಟಾಲ್ ಗಳು ಮತ್ತು ಹೋಟೆಲ್ ಗಳ ಮಾಲೀಕರಿಗೆ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ಟೋಬರ್ 3 ರಂದು ಸಂಜೆ 8 ಗಂಟೆಗೆ ದಸರಾ ವಸ್ತು ಪ್ರದರ್ಶನ ಪ್ರಾರಂಭವಾಗಲಿದೆ, ಅಂದೇ ಸರ್ಕಾರದ ವಿವಿಧ ಇಲಾಖೆಗಳ 30 ಸ್ಟಾಲ್ ಹಾಗೂ 153 ಖಾಸಗಿ ಸ್ಟಾಲ್ ಗಳು ಉದ್ಘಾಟನೆಯಾಗಲಿವೆ. ಪ್ರತಿಬಾರಿಯಂತೆ ಈ ಬಾರಿಯೂ ಮಕ್ಕಳಿಗೆ ಪ್ರವೇಶ ದರ 20 ರೂ., ವಯಸ್ಕರು ಹಾಗೂ ಇನ್ನಿತರರಿಗೆ 5 ರೂ. ಗಳನ್ನು ಹೆಚ್ಚಿಸಿ 35 ರೂ. ಟಿಕೆಟ್ ದರವನ್ನು ನಿಗಧಿ ಮಾಡಲಾಗಿದೆ ಎಂದು ಆಯೂಬ್ ಖಾನ್ ತಿಳಿಸಿದರು.

ವಸ್ತು ಪ್ರದರ್ಶನವು 90 ದಿನಗಳ ಕಾಲ ನಡೆಯಲಿದ್ದು, ಪ್ರತಿ ಭಾನುವಾರ ಚಲನಚಿತ್ರ ಕಲಾವಿದರಿಂದ ಮನರಂಜನ ಕಾರ್ಯಕ್ರಮಗಳು ಹಾಗೂ ಪ್ರತಿ ಶನಿವಾರ ಯುವ ಸಂಭ್ರಮದಲ್ಲಿ ಪ್ರದರ್ಶನ ನೀಡಿದ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದರು.

ದಸರಾ ವಸ್ತು ಪ್ರದರ್ಶನದಲ್ಲಿ ಸಾರ್ವಜನಿಕರನ್ನು ಹಾಗೂ ಪ್ರವಾಸಿಗರನ್ನು ಆಕರ್ಷಿಸಲು ಗುಲಾಬಿ ಹೂಗಳಿಂದ ಸೆಲ್ಫಿ ಪಾಯಿಂಟನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ವಸ್ತು ಪ್ರದರ್ಶನ ಪ್ರಾಧಿಕಾರದ ಸಿ.ಇ.ಒ ರುದ್ರೇಶ್, ಲಯನ್ಸ್ ಕ್ಲಬ್ ಸಂಸ್ಥೆಯ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Advertisement
Tags :
Advertisement