For the best experience, open
https://m.navayuganews.com
on your mobile browser.
Advertisement

ಮೈಸೂರು: ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಕನ್ನಡದಲ್ಲೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ತಿಳಿಸಿದರು.

Advertisement

ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಗಳಲ್ಲಿ ಆಯ್ಕೆಯಾದ 51000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನರೇಂದ್ರ ಮೋದಿಯವರು ರಾಷ್ಟ್ರೀಯ ರೋಜಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ, ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದು ತಿಳಿಸಿದರು‌

ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ.ಪ್ರಧಾನ ಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್, ಬೇಟಿ ಪಡಾವೋ ಯೋಜನೆ, ಮುಂತಾದ ಯೋಜನೆಗಳನ್ನು ಜಾರಿಗೆ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ದಿ ಮಾಡಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ಅನುದಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದು ಸಚಿವರು ತಿಳಿಸಿದರು.

ಸಂಸದ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಮಾತನಾಡಿ ಕಳೆದ 10 ವರ್ಷಗಳಲ್ಲಿ ಪ್ರಧಾನ ಮಂತ್ರಿ ಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047 ಕ್ಕೇ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ. ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ,ವಿಕಸಿತ ಭಾರತದ ಅಬಿವೃದ್ದಿಗೆ ಎಲ್ಲರೂ ಕೈಜೋಡಿಸಿ ಎಂದು ಕೋರಿದರು.

ಈ‌ ವೇಳೆ ಶಾಸಕ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆ ನಿರ್ದೇಶಕ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕಿ ಪುಷ್ಪಾವತಿ,
ದಕ್ಷಿಣ ಭಾರತದ ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್
ಚಂದ್ರಶೇಖರ್ ಕಾಕುಮಾನ್ ಮತ್ತಿತರರು ಉಪಸ್ಥಿತರಿದ್ದರು.

Advertisement
Tags :
Advertisement