ಮೈಸೂರು ದಸರಾ ಮಹೋತ್ಸವಕ್ಕೆ ಬಿಗಿ ಭದ್ರತೆ:ಸೀಮಾ ಲಾಟ್ಕರ್
02:32 PM Oct 02, 2024 IST
|
ಅಮೃತ ಮೈಸೂರು
Advertisement
ಮೈಸೂರು: ಅಕ್ಟೋಬರ್ ಮೂರರಿಂದ 12ರವರೆಗೆ ನಡೆಯುವ ದಸರಾ ಮಹೋತ್ಸವಕ್ಕೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ ಎಂದು ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಟ್ಕರ್ ತಿಳಿಸಿದ್ದಾರೆ.
Advertisement
ಒಂಬತ್ತು ದಿನಗಳ ಕಾಲ ನಡೆಯಲಿರುವ ನವರಾತ್ರಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ, 27 ಎಸ್ಪಿ ಮಟ್ಟದ ಅಧಿಕಾರಿಗಳು, 989 ಅಡಿಷನಲ್ ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ಗಳು, 3981 ಸಿಬ್ಬಂದಿ ಸೇರಿ ಈ ಬಾರಿ 5000ಕ್ಕೂ ಹೆಚ್ಚು ಮಂದಿ ಪೊಲೀಸರನ್ನು ದಸರಾ ವಿಶೇಷ ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
13,670 ಸಿಸಿ ಕ್ಯಾಮೆರಾ ಕಣ್ಗಾವಲನ್ನು ಮೈಸೂರಿನಾದ್ಯಂತ ಅಳವಡಿಸಲಾಗಿದೆ, ಪೊಲೀಸ್ ಸಹಾಯ ಕೇಂದ್ರಗಳನ್ನು ಪ್ರಮುಖ ಸ್ಥಳಗಳಲ್ಲಿ ತೆಗೆಯಲಾಗಿದೆ, ಪ್ರಮುಖ ಸ್ಥಳಗಳಲ್ಲಿ ವಾಚ್ ಟವರ್ ಗಳನ್ನು ಸಹ ಸ್ಥಾಪನೆ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಮಹಿಳೆಯರ ರಕ್ಷಣೆಗಾಗಿಯೇ ಚಾಮುಂಡಿ ಕಾರ್ಯ ಪಡೆಯನ್ನು ಸಹ ಆಯೋಜಿಸಲಾಗಿದೆ ಎಂದು ಇದೇ ವೇಳೆ ಸೀಮಾ ಲಾಟ್ಕರ್ ಮಾಹಿತಿ ನೀಡಿದರು.
Advertisement
Next Article