For the best experience, open
https://m.navayuganews.com
on your mobile browser.
Advertisement

ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,ಉತ್ತರ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಬೇಕು ಎಂಬ ಬೇಡಿಕೆ ಬಹಳ ವರ್ಷಗಳದ್ದು,ಹಾಗಾಗಿ ಪ್ರತ್ಯೇಕ ಸಚಿವಾಲಯ ಮಾಡುವ ಉದ್ದೇಶ ಇದೆ ಎಂದು ತಿಳಿಸಿದರು.

ತೊಗರಿಗೆ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕೆಂಬ ಬೇಡಿಕೆಯನ್ನ ರೈತರು ಇಟ್ಟಿದ್ದಾರೆ. ತೊಗರಿ ಬೆಳೆ ಸ್ಥಿತಿ ಗತಿ ಕುರಿತ ವರದಿ ಕೇಳಿದ್ದೇವೆ, ವರದಿ ಬಂದ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಲ್ಯಾಣ ಕರ್ನಾಟಕದ ಆರೋಗ್ಯ ವ್ಯವಸ್ಥೆಯಲ್ಲಿ ಇಂದು ಉದ್ಘಾಟನೆಗೊಳ್ಳಲಿರುವ ಜಯದೇವ ಆಸ್ಪತ್ರೆ ಮಹತ್ವದ್ದು. ರಾಜ್ಯ ಸಭೆ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೋರಾಟದ ಫಲವಾಗಿ 371J ಜಾರಿಯಾಗಿದೆ. ಇಲ್ಲಿ 371 ಬೆಡ್ ಗಳ ಆಸ್ಪತ್ರೆಯನ್ನು ಉದ್ಘಾಟಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಇದು ಕ್ರಿಮಿನಲ್ ಅಪರಾಧ. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ನಾಚಿಕೆಗೇಡಿನದ್ದು ಎಂದು ಸಿದ್ದರಾಮಯ್ಯ ಕಿಡಿಕಾರಿದರು.

Advertisement
Tags :
Advertisement