HeadlinesStateBengaluruNationalInternationalPoliticsSportsJob NewsEntertainmentHealth And LifestyleAgriculture And Nature
Advertisement

ಕ್ಯಾನ್ಸರ್‌ ‌ಗೆದ್ದುಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ಶಿವಣ್ಣ

03:56 PM Jan 01, 2025 IST | ಅಮೃತ ಮೈಸೂರು
Advertisement

ಬೆಂಗಳೂರು: ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್ ಅವರು ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ,ಗುಣಮುಖರಾಗಿದ್ದು,ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

Advertisement

ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದಂದೆ ತಾವು ಕ್ಯಾನ್ಸರ್‌ನಿಂದ ಮುಕ್ತರಾಗಿರುವುದಾಗಿ ಸಂತಸ ಹಂಚಿಕೊಂಡಿದ್ದಾರೆ.

ಅಮೆರಿಕದಿಂದಲೇ ಅಭಿಮಾನಿಗಳಿಗೆ ಸಂದೇಶವನ್ನು ಶಿವಣ್ಣ ರವಾನಿಸಿದ್ದಾರೆ.ಈ ಬಗ್ಗೆ ಗೀತಾ ಶಿವರಾಜ್‌ಕುಮಾರ್‌ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ನೀವೆಲ್ಲರೂ ಮಾಡಿದ ಪ್ರಾರ್ಥನೆಯಿಂದ ಶಿವರಾಜ್‌ಕುಮಾರ್‌ ಅವರ ಎಲ್ಲಾ ರಿಪೋರ್ಟ್‌ ನೆಗೆಟಿವ್‌ ಬಂದಿದೆ ಎಂದು ಹೇಳಿದ್ದಾರೆ.

ಶಿವರಾಜ್ಕುಮಾರ್ ಈವಾಗ ಕ್ಯಾನ್ಸರ್‌ ಫ್ರೀ ಅಂತ ವೈದ್ಯರು ಅಧಿಕೃತವಾಗಿ ಹೇಳಿದ್ದಾರೆ. ನಿಮ್ಮೆಲ್ಲರ ಹಾರೈಕೆಯಿಂದ ಅವರು ಗುಣಮುಖರಾಗಿದ್ದಾರೆ,ನಿಮ್ಮ ಹಾರೈಕೆಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ನಂತರ ಶಿವರಾಜಕುಮಾರ್ ಕೂಡಾ ಮಾತನಾಡಿ, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಭಯ ಆಗುತ್ತೆ ಮಾತನಾಡಬೇಕಾದರೆ, ಎಲ್ಲಿ ಎಮೋಷನಲ್‌ ಆಗಿ ಬಿಡುವೆನೊ ಅಂತ ಎಮೋಶನಲ್ ಅಗಿಯೇ ಹೇಳಿದರು.

ವೈದ್ಯರು ನನ್ನ ನೋಡಿಕೊಂಡ ರೀತಿಯಿಂದ ಇನ್ನಷ್ಟು ಧೈರ್ಯ ಬಂತು. ’45’ ಚಿತ್ರದ ಶೂಟಿಂಗ್‌ ಮಾಡುವಾಗ ಕಿಮೋ ಥೆರಫಿಯಲ್ಲಿ ಕೆಲಸ ಮಾಡಿದ್ದೀನಿ. ಕ್ಲೈಮ್ಯಾಕ್ಸ್‌ ಫೈಟ್‌ ಎಲ್ಲಾ ಮಾಡಿದ್ದೇನೆ ಎಂದು ಶಿವಣ್ಣ ಹೇಳಿದ್ದಾರೆ.

ಅಮೆರಿಕಗೆ ಚಿಕಿತ್ಸೆಗೆ ಹೊರಡುವ ಡೇಟ್‌ ಹತ್ತಿರ ಬಂದಾಗ ಟೆನ್ಷನ್‌ ಹೆಚ್ಚಾಗಿತ್ತು, ಆದರೆ ಸದಾ ಪತ್ನಿ ಗೀತಾ ಮತ್ತು ಮಗಳು ನಿವಿ ನನ್ನ ಜೊತೆ ಬೆಂಬಲವಾಗಿ ನಿಂತಿದ್ದಾರೆ ಎಂದು ತಿಳಿಸಿದರು.

ನನ್ನ ಚಿಕಿತ್ಸೆ ಮಾಡಿದ ವೈದ್ಯ ಮನೋಹರ್‌ ಅವರು ಮಗುವಿನಂತೆ ನನ್ನ ನೋಡಿಕೊಂಡರು. ಯೂರಿನರಿ ಬ್ಲಾಡರ್ ತೆಗೆದು ಹೊಸ ಬ್ಲಾಡರ್ ಹಾಕಿದ್ದಾರೆ. ಯಾರು ಗಾಬರಿ ಆಗಬೇಡಿ ನಾನು ಆರಾಮವಾಗಿದ್ದೇನೆ. ಐ ವಿಲ್‌ ಬಿ ಬ್ಯಾಕ್‌, ಡಬಲ್‌ ಪವರ್‌ನೊಂದಿಗೆ ಬರುತ್ತೇನೆ. ಎಲ್ಲಾ ನನ್ನ ಅಭಿಮಾನಿ ದೇವರುಗಳಿಗೆ ಧನ್ಯವಾದಗಳು ಎಂದು ಶಿವರಾಜ್ಕುಮಾರ್ ತಿಳಿಸಿದ್ದಾರೆ.

Advertisement
Tags :
Actor ShivarajkumarBangaluru
Advertisement
Next Article